ನಟಿ ರಾಗಿಣಿ ದ್ವಿವೇದಿ ಜೈಲುವಾಸ ಕೊನೆಗೂ ಅಂತ್ಯ, ಜಾಮೀನು ಮಂಜೂರು | Janata news
ಬೆಂಗಳೂರು : ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.
ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು.
ಕಳೆದ 140 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಕೊನೆಗೂ ಇಂದು ಸುಪ್ರೀಂ ಕೋರ್ಟ್ನಿಂದ ಸ್ಯಾಂಡಲ್ವುಡ್ ತುಪ್ಪದ ಹುಡುಗಿ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ಎರಡು ಬಾರಿ ರಾಗಿಣಿ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿತ್ತು.
RELATED TOPICS:
English summary :Sandalwood Drugs Mafia