ಅಮೇರಿಕಾದ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಾಶಯ ಹೇಳಿದ ಪ್ರಧಾನಿ ಮೋದಿ | Janata news
ನವದೆಹಲಿ : ಬುಧವಾರ ಮುಂಜಾನೆ(ಅಮೇರಿಕ ಕಾಲಮಾನ) ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಕ್ಷಣಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು, ಹೊಸದಾಗಿ ಅಧಿಕಾರ ವಹಿಸಿಕೊಂಡ ಜೋ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರಾಗಿ ಜೋ ಬಿಡೆನ್ ಅವರು ಅಧಿಕಾರ ವಹಿಸಿಕೊಂಡಿದ್ದಕ್ಕೆ ನನ್ನ ಆತ್ಮೀಯ ಅಭಿನಂದನೆಗಳು. ಭಾರತ-ಯುಎಸ್ ಕಾರ್ಯತಂತ್ರದ ಸಹಭಾಗಿತ್ವವನ್ನು ಬಲಪಡಿಸಲು ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ, ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ಸವಾಲುಗಳನ್ನು ಎದುರಿಸುವಲ್ಲಿ ಮತ್ತು ಜಾಗತಿಕ ಶಾಂತಿ ಮತ್ತು ಸುರಕ್ಷತೆಯನ್ನು ಹೆಚ್ಚಿಸುವಲ್ಲಿ ನಾವು ಒಗ್ಗಟ್ಟಿನಿಂದ ಮತ್ತು ದೃಡವಾಗಿ ನಿಲ್ಲುವಾಗ, ಯುಎಸ್ಎಯನ್ನು ಮುನ್ನಡೆಸುವಲ್ಲಿ ಯಶಸ್ವಿ ಅವಧಿಗೆ ನನ್ನ ಶುಭಾಶಯಗಳು, ಎಂದು ಅವರು ಸರಣಿ ಟ್ವೀಟ್ ಗಳ ಮೂಲಕ ಹೇಳಿದರು.
ಅಮೆರಿಕದ ಹೊಸ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಕೂಡ ಪ್ರಧಾನಿ ಮೋದಿ ಶುಭ ಹಾರೈಸಿದ್ದು, ಕಮಲಾ ಹ್ಯಾರಿಸ್ ಅವರಿಗೆ ಅಭಿನಂದನೆಗಳು. ಉಪಾಧ್ಯಕ್ಷೆ ಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ. ಇದು ಒಂದು ಐತಿಹಾಸಿಕ ಸಂದರ್ಭ. ಭಾರತ-ಯುಎಸ್ಎ ಸಂಬಂಧಗಳನ್ನು ಹೆಚ್ಚು ದೃಡವಾಗಿಸಲು ಅವರೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿದ್ದೇನೆ. ಭಾರತ-ಯುಎಸ್ಎ ಸಹಭಾಗಿತ್ವವು ನಮ್ಮ ಗ್ರಹಕ್ಕೆ ಪ್ರಯೋಜನಕಾರಿಯಾಗಿದೆ, ಎಂದು ಅವರು ಟ್ವೀಟ್ ಮಾಡಿದ್ದಾರೆ.