ನೀವೆಲ್ಲ ರಾಜಕೀಯವಾಗಿ ಸಮಾಧಿ ಆಗ್ತೀರಾ ಅಂತ ಮೊದಲೇ ಹೇಳಿದ್ದೆ, ಈಗ ನೋಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ! | Janata news
ಬೆಂಗಳೂರು : ವಲಸಿಗರಿಗೆ ಡಮ್ಮಿ ಖಾತೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರ ಮಾತನಾಡಿದ ಡಿ.ಕೆ.ಶಿವಕುಮಾರ್, ಸಚಿವ ಸಂಪುಟ ವಿಸ್ತರಣೆ ವೇಳೆ ಜೆಡಿಎಸ್-ಕಾಂಗ್ರೆಸ್ ನಿಂದ ಹೋಗಿ ಬಿಜೆಪಿ ಸೇರಿರುವ ಶಾಸಕರಿಗೆ ಅನ್ಯಾಯ ಮಾಡಿದ್ದಾರೆ.
ವಲಸಿಗ ಸಚಿವರಿಗೆ ಡಮ್ಮಿ ಖಾತೆ ನೀಡಿದ್ದಾರೆ. ನಾನು ವಿಧಾನಸಭೆಯಲ್ಲಿ ಈ ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯವಾಗಿ ಸಮಾಧಿ ಆಗುತ್ತಿದ್ದರೆಂದು. ಈಗ ನೋಡಿ ಯಾವ್ಯಾವ ಖಾತೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಐಸಿಯು, ವೆಂಟಿಲೇಟರ್ನಲ್ಲಿ ನಡೆಯುತ್ತಿದೆ ಎಂದು ಲೇವಡಿ ಮಾಡಿದ್ದಾರೆ.
ಗೋಪಾಲಯ್ಯ, ಎಂಟಿಬಿ ನಾಗರಾಜ್, ನಾರಾಯಣಗೌಡ, ರೋಷನ್ ಬೇಗ್ ಕಥೆ ಏನಾಗಿದೆ ನೋಡಿ. ಎಂಟಿಬಿಗೆ ವಸತಿ ಖಾತೆ ಇತ್ತು ಪಾಪ ಈಗ ಅವನು ಅಲ್ಲಿ ಬಾಟಲ್ ಮಾರಾಟ ಮಾಡಬೇಕೆಂತೆ. ಅವರೆನೆಲ್ಲಾ ಯೂಸ್ ಅಂಡರ್ ಥ್ರೋ ಮಾಡಿದ್ದಾರೆ. ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.