ಕಾರುಗಳ ಮಧ್ಯೆ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು | Janata news
ಚಿತ್ರದುರ್ಗ : ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಗ್ರಾಮದ ಬಳಿ ನಡೆದಿದೆ.
ಮಾರುತಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ವನಜಾಕ್ಷಿ (36), ಹುಂಡೈ ಕಾರಿನಲ್ಲಿದ್ದ ಚಿತ್ರದುರ್ಗ ಮೂಲದ ಮಹೇಂದ್ರ (50) ಸ್ಥಳದಲ್ಲೇ ಮೃತರಾದ ದುರ್ದೈವಿಗಳು ಎನ್ನಲಾಗಿದೆ.
5ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಗಾಯಾಳುಗಳನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
RELATED TOPICS:
English summary :chitradurga