ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ | Janata news
ಬೆಂಗಳೂರು : 2020-21ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದು ದಿನಾಂಕ ನಿಗದಿ ಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜೂನ್ 14-06-2021ರಿಂದ 25-06-2021ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜೂನ್ 14ರಂದು ಪ್ರಥಮ ಭಾಷೆ,
ಜೂ.16 ಗಣಿತ, ಸಮಾಜ ಶಾಸ್ತ್ರ,
ಜೂ.18 ದ್ವಿತೀಯ ಭಾಷೆ,
ಜೂ. 21 ವಿಜ್ಞಾನ,
ಜೂ.23 ತೃತೀಯ ಭಾಷೆ,
ಜೂ.25 ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿದೆ.
ಇದು ತಾತ್ಕಾಲಿಕ ಪರೀಕ್ಷಾ ವೇಳಾ ಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ ಫೆಬ್ರವರಿ 26ರೊಳಗೆ ಸಲ್ಲಿಸುವಂತೆ ತಿಳಿಸಿದರು.