Sun,May19,2024
ಕನ್ನಡ / English

ಗಾಂಧೀಜಿಯನ್ನು ಹತ್ಯೆಗೈದವರನ್ನ ಪ್ರತಿಮೆ ಮಾಡಿ ಪೂಜಿಸೋ ಕೆಲಸ ನಡೆಯುತ್ತಿದೆ: ಸಿದ್ದರಾಮಯ್ಯ | Janata news

30 Jan 2021
1292

ಬೆಂಗಳೂರು : ಗಾಂಧೀಜಿ ಅವರನ್ನು ಹತ್ಯೆ ಮಾಡಿರುವ ನಾಥೂರಾಮ್ ಗೋಡ್ಸೆಯ ಪ್ರತಿಮೆ ಮಾಡಿ ಪೂಜಿಸುವ ವ್ಯವಸ್ಥೆ ದೇಶದಲ್ಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗಾಂಧೀಜಿ ದೇಶದಲ್ಲಿ ಶಾಂತಿ ನೆಲೆಸಬೇಕು, ಎಲ್ಲರೂ ನೆಮ್ಮದಿಯಿಂದ ಬಾಳಬೇಕು, ಸೌಹಾರ್ದತೆ ನೆಲೆಸಬೇಕು ಎಂದುಕೊಂಡವರು. ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಡಿದ್ರೋ ಅದಕ್ಕಿಂತಲೂ ಹೆಚ್ಚು ಶಾಂತಿ ಸೌಹಾರ್ದತೆಗಾಗಿ ಹೋರಾಡಿದವರು. ಗಾಂಧೀಜಿ ಜೊತೆಗೆ ಬಹಳಷ್ಟು ಜನ ಹೋರಾಟ ಮಾಡಿದ್ದಾರೆ, ಅವರನ್ನೂ ನಾವು ಸ್ಮರಿಸಬೇಕು ಎಂದರು.

ಮಹಾತ್ಮ ಗಾಂಧೀಜಿ ಯಾರ ವಿರುದ್ಧ ಹೋರಾಡಿದ್ರೋ ಅವರಿಂದ ಹತ್ಯೆ ಆಗಲಿಲ್ಲ. ಜನರ ಮಧ್ಯೆ ಬಂದು ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದ. ಗಾಂಧೀಜಿಯವರು ಬರೀ ಸ್ವಾತಂತ್ರ್ಯ ಚಳವಳಿ ಮಾಡಲಿಲ್ಲ. ರೈತ ಹೋರಾಟ, ಕಾರ್ಮಿಕ ಹೋರಾಟ ಎಲ್ಲ ಮಾಡಿದರು.

ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ತಮ್ಮ ಜೀವನ ಪಯಣ ನಡೆಸಿದ ಗಾಂಧೀಜಿ ಮಹಾನ್ ಸಮಾಜ ಪರಿವರ್ತಕ. ಗಾಂಧೀಜಿ ಜೀವನ ಮತ್ತು ಸಾಧನೆ ಹೇಗೆ ನಮ್ಮ ಆದರ್ಶಪ್ರಾಯವೋ, ಅದೇ ರೀತಿ ಅವರ ಸಾವು ಕೂಡಾ ನಮಗೆ ಪಾಠವಾಗಿದೆ.

ಗಾಂಧೀಜಿಯವರು ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ. ಅವರು ಬಹುಮುಖ್ಯವಾದ ಕೋಮು ಸಾಮರಸ್ಯಕ್ಕಾಗಿ ಕೂಡಾ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು. ಈ ತನ್ನ ಹೋರಾಟಕ್ಕಾಗಿಯೇ ತನ್ನ ಪ್ರಾಣವನ್ನು ಕಳೆದುಕೊಂಡರು ಎಂದು ಸಿದ್ದರಾಮಯ್ಯ ಹೇಳಿದರು.

ಸ್ವಾತಂತ್ರ್ಯ ಹೋರಾಟದ ಮೂಲಕ ಬ್ರಿಟಿಷರ ಗುಲಾಮಗಿರಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ ನಮಗೆ ರಾಜಕೀಯ ಸ್ವಾತಂತ್ರ್ಯವನ್ನು ನಮಗೆ ಗಳಿಸಿಕೊಟ್ಟರು. ಈಗ ನಾವು ನವ ವಸಾಹತುಷಾಹಿಗಳ ವಿರುದ್ಧ ಹೋರಾಡಿ ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆಯಲು ಇನ್ನೊಂದು ಸ್ವಾತಂತ್ರ್ಯಹೋರಾಟ ನಡೆಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗಾಂಧಿಯವರನ್ನ ಕೊಂದವರನ್ನ ಪ್ರತಿಮೆ ಮಾಡಿ ಪೂಜಿಸೋ ಕೆಲಸ ನಡೆಯುತ್ತಿದೆ. ಇದಕ್ಕಿಂತ ದೇಶದ್ರೋಹ ಮತ್ತೊಂದಿಲ್ಲ. ದೇಶದ ಸ್ವಾತಂತ್ರ್ಯದಲ್ಲಿ ಬಿಜೆಪಿ ಆರ್​ಎಸ್​​ಎಸ್​ ನವರು ಸತ್ತಿದ್ದಾರಾ?.. ನಾವು ಇವರಿಂದ ಪಾಠ ಕಲಿಯಬೇಕಾಗಿಲ್ಲ. ಇಂದಿರಾಗಾಂಧಿ, ರಾಜೀವ್​ಗಾಂಧಿ ದೇಶಕ್ಕಾಗಿ ಪ್ರಾಣಕೊಟ್ಟರು ಎಂದು ಸಿದ್ದರಾಮಯ್ಯ ಹೇಳಿದರು.

janata

ಗಾಂಧೀಜಿ, ಇಂದಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣ ತೆತ್ತರು. ಬಿಜೆಪಿಯವರು ದೇಶ ಹಾಳು ಮಾಡುತ್ತಿದ್ದಾರೆ. ಇವರ ವಿರುದ್ಧ ಎರಡನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅಣಿಯಾಗಬೇಕಿದೆ. ಯಾರೂ ನೆಮ್ಮದಿಯಿಂದ ಇರದ ವಾತಾವರಣ ಮಾಡುತ್ತಿದ್ದಾರೆ. ಕಾರ್ಮಿಕ, ರೈತ ವಿರೋಧಿ, ಸಾಮರಸ್ಯ ಕೆಡಿಸುವ, ಅನಗತ್ಯ ಕಾನೂನನ್ನು ಜಾರಿಗೆ ತರುತ್ತಿದ್ದಾರೆ. ರೈತರು ಎರಡು ತಿಂಗಳಿಂದ ದಿಲ್ಲಿಯಲ್ಲಿ ಹೋರಾಡುತ್ತಿದ್ದಾರೆ. ನರೇಂದ್ರ ಮೋದಿ ದೇಶದಲ್ಲಿ‌ ಏನೂ ನಡೆಯುತ್ತಿಲ್ಲ ಅನ್ನುವ ರೀತಿ ಪ್ರಸನ್ನ ವದನರಾಗಿದ್ದಾರೆ.

ಇಂದು ಕೃಷಿ ವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಇದು ಹಿಂಸೆಯನ್ನು ಕೂಡಾ ಅಹಿಂಸೆಯ ಮೂಲಕ ಹೋರಾಡಿ ಗೆದ್ದ ಮಹಾತ್ಮ ಗಾಂಧೀಜಿ ಅವರಿಗೆ ತೋರುವ ಅಗೌರವವಾಗಿದೆ ಎಂದರು.

ದೇಶದಲ್ಲಿ ಬಿಜೆಪಿ ಕಪಿಮುಷ್ಠಿಯಿಂದ ದೇಶ ರಕ್ಷಿಸುವ ಹೋರಾಟ ನಡೆಯಬೇಕು. ಇವರು ಅಧಿಕಾರದಲ್ಲಿ ಇದ್ದಷ್ಟೂ ದಿನ ದೇಶಕ್ಕೆ ಉಳಿಗಾಲವಿಲ್ಲ. ಇವರನ್ನು ತೊಲಗಿಸಬೇಕಿದೆ. ಬಿಜೆಪಿ ಕಿತ್ತೊಗೆಯವ ಕಾರ್ಯ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಆ ಸಂಕಲ್ಪ ಮಾಡೋಣ. ಎಲ್ಲ ಸೇರಿ ಹೋರಾಡೋಣ ಎಂದರು.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...