ದಿಶಾ ರವಿ ಅವರನ್ನು ಬಂಧಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಪ್ರಮುಖ ವಿರೋಧ ಪಕ್ಷಗಳೂ ಸೇರಿದಂತೆ ಶತ್ರುರಾಷ್ಟ್ರ
Sun,May19,2024
ಕನ್ನಡ / English

ದಿಶಾ ರವಿ ಬಂಧನ : ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕರು ಸೇರಿದಂತೆ ಪಾಕಿಸ್ತಾನದ ವಾಗ್ದಾಳಿ | Janata news

15 Feb 2021
1718

ನವದೆಹಲಿ : ಜಾಗತಿಕ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ನ ಹೊರಹಾಕಿದ್ದ, ಟೂಲ್‌ಕಿಟ್, ಷಡ್ಯಂತ್ರದ ಪ್ರಕರಣದ ತನಿಖೆಗಾಗಿ ಬೆಂಗಳೂರು ಮೂಲದ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಪ್ರಮುಖ ವಿರೋಧ ಪಕ್ಷಗಳೂ ಸೇರಿದಂತೆ ಶತ್ರುರಾಷ್ಟ್ರ ಪಾಕಿಸ್ತಾನ ಕೂಡ ವಾಗ್ದಾಳಿ ಪ್ರಾರಂಭಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಪಾಕಿಸ್ತಾನದ ಪಿಟಿಐ, ಮೋದಿ/ಆರ್‌ಎಸ್‌ಎಸ್ ಆಡಳಿತದಲ್ಲಿರುವ ಭಾರತವು ಐಐಒಜೆಕೆ ಯಲ್ಲಿ ಮಾಡಿದಂತೆ ಅವರ ವಿರುದ್ಧ ಎಲ್ಲಾ ಧ್ವನಿಗಳನ್ನು ಮೌನಗೊಳಿಸುವ ನಂಬಿಕೆ ಹೊಂದಿದೆ. ಕ್ರಿಕೆಟಿಗರು ಮತ್ತು ಬಾಲಿವುಡ್ ಸೆಲೆಬ್ರಿಟಿಗಳ ನಿರೂಪಣಾ ಸೃಷ್ಟಿಗೆ ಬಳಸುವುದು ಸಾಕಷ್ಟು ನಾಚಿಕೆಗೇಡಿನ ಸಂಗತಿಯಾಗಿದೆ, ಆದರೆ ಈಗ ಅವರು ಟ್ವಿಟರ್ ಟೂಲ್ಕಿಟ್ ಪ್ರಕರಣದ ಬಗ್ಗೆ ದಿಶಾ ರವಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ, ಎಂದು ಅಕ್ರೋಶ ಹೊರಹಾಕಿದೆ.

ಸೋಮವಾರ ಬೆಳಿಗ್ಗೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, 21 ವರ್ಷದ ದಿಶಾ ರವಿ ಅವರ ಬಂಧನವು ಪ್ರಜಾಪ್ರಭುತ್ವದ ಮೇಲಿನ ಅಭೂತಪೂರ್ವ ದಾಳಿಯಾಗಿದೆ, ಎಂದು ಹೇಳಿಕೊಳ್ಳಲು ಟ್ವಿಟರ್‌ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಇನ್ನೂ, ಕಾಂಗ್ರೆಸ್ ಮುಖಂಡ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ದಿಶಾ ರವಿ ಬಂಧನದ ಕುರಿತಾದ ವರದಿಗಳನ್ನು ಹಂಚಿಕೊಂಡು, ಹೇಳು, ನಿಮ್ಮ ತುಟಿಗಳು ಮಾತನಾಡಲು ಮುಕ್ತವಾಗಿವೆ. ಹೇಳು, ಸತ್ಯ ಇನ್ನೂ ಜೀವಂತವಾಗಿದೆ! ಅವರು ಭಯಭೀತರಾಗಿದ್ದಾರೆ, ದೇಶವಲ್ಲ!, ಎಂದು ಸಾಂಕೇತಿಕ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

ಪ್ರಿಯಂಕಾ ಗಾಂಧಿ ವಾಡ್ರಾ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, ಬಂದೂಕುದಾರಿಗಳು ನಿರಾಯುಧ ಹುಡುಗಿಗೆ ಹೆದರುತ್ತಿದ್ದರು. ನಿರಾಯುಧ ಹುಡುಗಿಯಿಂದ ಧೈರ್ಯದ ಬೆಳಕು ಚೆಲ್ಲಿದೆ, ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ರಾಜ್ಯದ ನಾಯಕರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ ಎನ್ನುವ ಪ್ರಧಾನಿ ನರೇಂದ್ರ ಮೋದಿ, ಶಿಕ್ಷಿತ ಹೆಣ್ಣುಮಕ್ಕಳು ತಮ್ಮನ್ನು ಪ್ರಶ್ನಿಸಿದರೆ ಬಂಧಿಸಿ ಜೈಲಿಗೆ ಹಾಕುತ್ತಾರೆ. ದಿಶಾ ರವಿ ಬಂಧನ ಪ್ರಜೆಗಳ ಮೇಲಿನ ದೌರ್ಜನ್ಯ ಮಾತ್ರವಲ್ಲ, ಮಹಿಳೆಯರ ಮೇಲಿನ ದೌರ್ಜನ್ಯವೂ ಹೌದು. ನೆನಪಿರಲಿ: ನಾರಿ‌ ಮುನಿದರೆ ಮಾರಿ, ಎಂದು ಎಚ್ಚರಿಕೆ ನೀಡಿದ್ದಾರೆ.

English summary :Disha Ravi arrested : Pakistan joins opposition leaders to slam Modi govt

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ