Fri,May03,2024
ಕನ್ನಡ / English

ಫೆ.22ರಿಂದ 6-8 ತರಗತಿಗಳಿಗೆ ಫುಲ್​ಟೈಂ ತರಗತಿ ಶುರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ | Janata news

16 Feb 2021
1614

ಬೆಂಗಳೂರು : ಕೋವಿಡ್​ ಮಾರ್ಗಸೂಚಿ ಅನುಸರಿಸಿ 9 ರಿಂದ ದ್ವಿತೀಯ ಪಿಯುಸಿವರೆಗೆ ತರಗತಿಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ, ಇದೀಗ ಉಳಿದ ತರಗತಿಗಳ ಆರಂಭಕ್ಕೆ ಗ್ರೀನ್​ ಸಿಗ್ನಲ್​ ಸಿಕ್ಕಿದೆ.

ಫೆಬ್ರವರಿ 22ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸುವುದಕ್ಕೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಶಿಕ್ಷಣ ಸಚಿವ ಎಸ್.​ಸುರೇಶ್​ ಕುಮಾರ್​ ನೇತೃತ್ವದಲ್ಲಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಜ್ಯ ಕರೊನಾ ತಾಂತ್ರಿಕ ಸಲಹಾ ಸಮಿತಿ ಜತೆ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್​ಕುಮಾರ್, ಫೆ.22ರಿಂದ 6,7 ಮತ್ತು 8ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಪೂರ್ಣ ಪ್ರಮಾಣದ ತರಗತಿ ಆರಂಭ ಆಗಲಿದೆ. ಆದರೆ, ಬೆಂಗಳೂರು ನಗರ ಹಾಗೂ ಕೇರಳ ಗಡಿ ಭಾಗದ ಪ್ರದೇಶಗಳಲ್ಲಿ 6 ಮತ್ತು 7ನೇ ತರಗತಿ ಆರಂಭವಿಲ್ಲ. 8ನೇ ತರಗತಿ ಮಾತ್ರ ಆರಂಭ ಆಗಲಿದೆ ಎಂದು ವಿವರಿಸಿದರು. ಹಾಜರಾತಿ ಯಾವುದೇ ಕಾರಣಕ್ಕೂ ಕಡ್ಡಾಯವಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆಯನ್ನು ಆರಂಭಿಸಲಾಗುವುದು. ವಿದ್ಯಾಗಮದ ಫಲಿತಾಂಶಗಳನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಶಾಲೆ ಆರಂಭವಾಗದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಮಕ್ಕಳಿಗೆ ನಿರಂತರ ಶಿಕ್ಷಣ ಕಲಿಕೆ ಅನಿವಾರ್ಯವಾಗಿದ್ದು, ಈಗಾಗಲೇ ಹಲವು ರಾಜ್ಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಆರಂಭವಾಗಿವೆ. ನಮ್ಮ ರಾಜ್ಯದಲ್ಲೂ ತರಗತಿಗಳನ್ನ ಪ್ರಾರಂಭಿಸಬಹುದು ಎಂದು ಶಿಕ್ಷಣ ಇಲಾಖೆ ಮನವಿ ಮಾಡಿತ್ತು ಎಂದಿದ್ದಾರೆ.

ಜೊತೆಗೆ ಶೈಕ್ಷಣಿಕ ಚಟುವಟಿಕೆಗಳು ಕುಂಠಿತವಾಗಿರುವುದು ಮಕ್ಕಳ ಮನಸ್ಸಿನ ಮೇಲೂ ಕೂಡ ಪರಿಣಾಮವನ್ನುಂಟು ಮಾಡಿದೆ. ಮಕ್ಕಳು ಶಾಲೆಯಿಂದ ದೂರ ಉಳಿಯುವುದರಿಂದ ದೂರಗಾಮಿ ಪರಿಣಾಮ ಬೀರಲಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಶಾಲಾ ತರಗತಿಗಳನ್ನು ಆರಂಭಿಸುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ.

RELATED TOPICS:
English summary :Suresh Kumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...