Sat,Apr27,2024
ಕನ್ನಡ / English

ಮನೆಗೆ ತರಿಸಿಕೊಂಡು ಕೊರೋನಾ ಲಸಿಕೆ ಹಾಕಿಸಿಕೊಂಡ ಬಿ.ಸಿ. ಪಾಟೀಲ್ | Janata news

02 Mar 2021
1572

ಹಾವೇರಿ : ಸ್ವತ: ಪ್ರಧಾನಿ ಮೋದಿ ಆಸ್ಪತ್ರೆಗೆ ಹೋಗಿ ನಿನ್ನೆ ಲಸಿಕೆ ಪಡೆಯೋ ಮೂಲಕ 130 ಕೋಟಿ ಜನರಿಗೆ ಲಸಿಕೆ ಪಡೆಯಲು ಪ್ರೇರೇಪಿಸಿದ್ದಾರೆ. ಆದ್ರೆ ಈ ಮಧ್ಯೆ, ರಾಜ್ಯದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹಾಗೂ ಅವರ ಕುಟುಂಬ ಸಹ ಲಸಿಕೆ ಹಾಕಿಸಿಕೊಂಡಿದ್ದು ಸಚಿವರ ದೌಲತ್ತಿಗೆ ಆಕ್ರೋಶ ವ್ಯಕ್ತವಾಗಿದೆ.

ಈ ಮಧ್ಯೆ ಬಿಜೆಪಿ, ತನ್ನ ಸಂಸದರು, ಸಚಿವರು ಹಾಗೂ ಶಾಸಕರಿಗೆ ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಹೀಗಾಗಿ ರಾಜ್ಯದಲ್ಲಿಯೂ ಬಿಜೆಪಿ ಸಚಿವರು, ಶಾಸಕರು ಒಬ್ಬೊಬ್ಬರಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರಿನ ತಮ್ಮ ಮನೆಯಲ್ಲಿ ಸರ್ಕಾರಿ ವೈದ್ಯರಿಂದ ಕೊರೊನಾ ಲಸಿಕೆ ಪಡೆದಿದ್ದಾರೆ. ಪಾಟೀಲ್ ಪತ್ನಿ ಕೂಡ ಮನೆಯಲ್ಲಿಯೇ ಲಸಿಕೆ ಪಡೆದುಕೊಂಡಿದ್ದಾರೆ.

ಮನೆಯಲ್ಲಿಯೇ ಕೂತು ಸಚಿವರು ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರಾದ ಮಾತ್ರಕ್ಕೆ ಆರೋಗ್ಯ ಸಿಬ್ಬಂದಿಯನ್ನೇ ತಮ್ಮ ಮನೆಗೆ ಕರೆಸಿ ದರ್ಪ ತೋರಿಸುವುದು ಎಷ್ಟು ಸರಿ ಎಂದು ಕೆಲವರು ಸಚಿವರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನೆಯಲ್ಲಿಯೇ ಲಸಿಕೆ ಪಡೆದಿದ್ದು ಏಕೆ? ಎಂಬ ಪ್ರಶ್ನೆ ಕೇಳಿ ಬರುತ್ತಿದೆ. ಲಸಿಕೆ ಪಡೆಯುವಾಗ ಮುನ್ನೆಚ್ಚರಿಕೆ ಕ್ರಮಗಳು ಅಗತ್ಯ. ಹೀಗಾಗಿಯೇ ಎಲ್ಲರಿಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಲು ಸೂಚನೆ ನೀಡಲಾಗಿದೆ.

ಮನೆಗೆ ವೈದ್ಯರನ್ನು ಕರೆಸಿಕೊಂಡು ಲಸಿಕೆ ಹಾಕಿಸಿಕೊಂಡ ಸಂಬಂಧ ಸ್ಪಷ್ಟನೆ ನೀಡಿರುವ ಸಚಿವ ಬಿ.ಸಿ ಪಾಟೀಲ್, 30 ನಿಮಿಷಗಳ ಕಾಲ ವಿಶ್ರಾಂತಿ ಪಡೀಬೇಕೆಂದು ಗೊತ್ತಿತ್ತು. ನಿನ್ನೆ ನಾನು ಮನೆಗೆ ತಡವಾಗಿ ಬಂದಿದ್ದೆ. ಕ್ಷೇತ್ರದ ಜನರೂ ಕೂಡ ಬೆಳಗ್ಗೆಯೇ ಮನೆಗೆ ಬಂದಿದ್ದರು. ಹೀಗಾಗಿ ಮನೆಯಲ್ಲಿಯೇ ವೈದ್ಯರಿಂದ ಲಸಿಕೆ ಪಡೆದಿದ್ದೇನೆ. ಆಸ್ಪತ್ರೆಗೆ ಹೋಗಿ ಲಸಿಕೆ ಪಡೆಯಬೇಕೆಂದು ಗೊತ್ತಿರಲಿಲ್ಲ. ಈ ವಿಷಯ ನನಗೆ ಗೊತ್ತಾಗಿದ್ದರೆ ಆಸ್ಪತ್ರೆಗೆ ಹೋಗುತ್ತಿದ್ದೆ. ನನಗೆ ಅನಾರೋಗ್ಯ ಇದ್ದಾಗ ವೈದ್ಯರು ಮನೆಗೆ ಬರ್ತಿದ್ರು. ಅದೇ ರೀತಿ ಇಂದು ವೈದ್ಯರನ್ನು ಕರೆದು ಲಸಿಕೆ ಪಡೆದಿದ್ದೇನೆ ಎಂದು ಹೇಳಿದ್ದಾರೆ.

RELATED TOPICS:
English summary :B.C.Patil

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...