Fri,Apr26,2024
ಕನ್ನಡ / English

ಲಾರಿಗೆ ದಿಬ್ಬಣದ ಬಸ್​ ಡಿಕ್ಕಿ: ಹೊತ್ತಿ ಉರಿದ ಬಸ್​, ಇಬ್ಬರು ಸಜೀವ ದಹನ | Janata news

04 Mar 2021
2203

ಬಾಗಲಕೋಟೆ : ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಸಮೀಪ ಇಂದು ಸಂಜೆ ಲಾರಿ ಹಾಗೂ ಮಿನಿ ಲಕ್ಸುರಿ ಬಸ್​ ನಡುವೆ ಡಿಕ್ಕಿ ಸಂಭವಿಸಿದೆ.

ಈ ಭೀಕರ ಅಪಘಾತದಲ್ಲಿ ಬಸ್​ ಹೊತ್ತಿ ಉರಿದಿದೆ. ಈ ವೇಳೆ ಇಬ್ಬರು ಸಜೀವವಾಗಿ ದಹನಗೊಂಡಿರುವ ಭಯಾನಕ ಘಟನೆ ನಡೆದಿದೆ.

ಬೇರೊಂದು ವಾಹನ ಹಿಂದಕ್ಕೆ ಹಾಕುವ ಭರದಲ್ಲಿ ಮ್ಯಾಕ್ಸಿಕ್ಯಾಬ್ ವಿದ್ಯುತ್ ಕಂಬಕ್ಕೆ ಢಿಕ್ಕಿಹೊಡೆದಿದ್ದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ವೇಳೆ ರಸ್ತೆ ಪಕ್ಕದಲ್ಲಿನ ಹೊಲದತ್ತ ರಭಸವಾಗಿ ಚಲಿಸಿದ್ದು, ಹೊಲದಲ್ಲಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಪರಿಣಾಮ ವಿದ್ಯುತ್ ಕಂಬದಲ್ಲಿ ಟಿಸಿ ಇದ್ದಿದ್ದರಿಂದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಬಸ್‌ನಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.

janata

ಸುಟ್ಟುಹೋದವರನ್ನು ಈರವ್ವ ಗಾಣಿಗೇರ (70) ಹಾಗೂ ಅನ್ನಕ್ಕ ಗಾಣಿಗೇರ (58) ಎಂದು ಗುರುತಿಸಲಾಗಿದೆ. ಇವರು ಬೆಳಗಾವಿ ಜಿಲ್ಲೆ ಯಾದವಾಡ ಗ್ರಾಮದವರು. ಅಥಣಿ ತಾಲ್ಲೂಕಿನ ಚಮಕೇರಿ ಗ್ರಾಮಕ್ಕೆ ಮದುವೆಗೆ ಹೋಗಿದ್ದರು. ಚಮಕೇರಿ ಗ್ರಾಮದಿಂದ ಯಾದವಾಡ ಗ್ರಾಮಕ್ಕೆ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮ್ಯಾಕ್ಸಿಕ್ಯಾಬ್‌ನಲ್ಲಿ 20ಕ್ಕೂ ಹೆಚ್ಚು ಜನರಿದ್ದು, ಅಪಘಾತದಲ್ಲಿ ಗಾಯಗೊಂಡ 11 ಮಂದಿಯನ್ನು ಮುಧೋಳದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿದ್ದು, ಬೆಂಕಿ ನಂದಿಸಿದ್ದಾರೆ. ಈ ಘಟನೆ ಕುರಿತು ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

janata

RELATED TOPICS:
English summary :Bagalkote

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...