Mon,May06,2024
ಕನ್ನಡ / English

ಇನ್ನೊಂದು ತಿಂಗಳಲ್ಲಿ ಬಿಎಸ್ ವೈ, ಬಿವೈಆರ್, ಈಶ್ವರಪ್ಪ ಹಗರಣ ಬಯಲು: ಶಾಸಕ ಸಂಗಮೇಶ್ | Janata news

06 Mar 2021
1547

ಬೆಂಗಳೂರು : ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ ಸದನದಿಂದ ಅಮಾನತಾಗಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ನಾನು ದಾಖಲೆಗಳನ್ನು ಹಿಡಿದುಕೊಂಡು ಬ್ಲಾಕ್​ಮೇಲ್​ ಮಾಡುತ್ತಿಲ್ಲ. ಆ ರೀತಿ ಬ್ಲಾಕ್​ ಮೇಲ್​ ಮಾಡುವ ಜನರೇ ಬೇರೆ. ನಾನೇ ಬೇರೆ. ಬಿಜೆಪಿ ಸರ್ಕಾರ ಎಕ್ಕುಟ್ಟೋಗುತ್ತೆ ನೋಡುತ್ತಾ ಇರಿ. ಇವರಿಂದಾಗಿ ನಮಗೂ ಮರ್ಯಾದೆ ಇಲ್ಲದಾಗಿದೆ. ಜನರ ಸೇವೆ ಮಾಡಿ ಎಂದರೆ ಇಲ್ಲಿ ಮಜಾ ಮಾಡುತ್ತಾರೆ ಎಂದು ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದರು.

ಸಿಎಂ, ರಾಘವೇಂದ್ರ, ಈಶ್ವರಪ್ಪ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಇವರ ವರ್ತನೆ ಕಂಡು ಶಿವಮೊಗ್ಗ ಜಿಲ್ಲೆಯ ಜನರೇ ಅಸಹ್ಯ ಪಡುತ್ತಿದ್ದಾರೆ. ನಮ್ಮ ಮೇಲೆ, ಕುಟುಂಬದ ಮೇಲೆ ಕೇಸ್ ಹಾಕಿದ್ದಾರೆ.

ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಸ್ಪೀಕರ್ ನಮಗೆ ನ್ಯಾಯ ಕೊಡಿಸಬೇಕು. ಯಡಿಯೂರಪ್ಪ ಸೂಚನೆ ಮೇರೆಗೆ ಸದನದಿಂದ ನನ್ನನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಇವರ ಹಗರಣ ಹೊರಬಂದು ಬಿಜೆಪಿ ಸರ್ಕಾರ ಪತನಗೊಳ್ಳಲಿದೆ. ಬಿಜೆಪಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದರು.

ನನ್ನ ವಿರುದ್ಧ ದಾಖಲಾದ ಕ್ರಿಮಿನಲ್​ ಮೊಕ್ಕದ್ಧಮೆ ಕುರಿತು ಅಧಿವೇಶನದಲ್ಲಿ ಗಮನ ಸೆಳೆಯಲು ಮುಂದಾದೆ. ಆದರೆ, ಸ್ಪೀಕರ್ ನನ್ನ ಮನವಿಗೆ ಮನ್ನಣೆ ಕೊಡಲಿಲ್ಲ. ಶರ್ಟ್ ಬಿಚ್ಚಿದರಾದರೂ ಮನ್ನಣೆ ಕೊಡುತ್ತಾರೆ ಎಂದುಕೊಂಡೆ. ಆದರೆ ಸ್ಪೀಕರ್ ನಡೆದುಕೊಂಡಿದ್ದು ಯಾವ ಪ್ರಜಾಪ್ರಭುತ್ವ ಎಂದು ಪ್ರಶ್ನಿಸಿದ ಅವರು, ಈ ಸರ್ಕಾರಕ್ಕೆ ಎರಡು ಮೂರು ತಿಂಗಳು ಮಾತ್ರ ಆಯುಷ್ಯ ಇರುವುದು ಎಂದು ಭವಿಷ್ಯ ನುಡಿದರು.

RELATED TOPICS:
English summary :BK Sangamesh

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...