Fri,May03,2024
ಕನ್ನಡ / English

ಐತಿಹಾಸಿಕ ಹಂಪಿ ಕೋಟೆಯ ಕಲ್ಲಿನ ಗೋಡೆ ಕುಸಿತ | Janata news

12 Mar 2021
2125

ವಿಜಯನಗರ : ವಿಜಯನಗರ ತಾಲೂಕಿನ ಐತಿಹಾಸಿಕ ಹಂಪಿಯ ಕಮಲ ಮಹಲ್‌ ಸ್ಮಾರಕ ಸುತ್ತಲಿನ ಕೋಟೆಯ ಕಲ್ಲಿನ ಗೋಡೆ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿ ಕಮಲ ಮಹಲ್‌ ಸ್ಮಾರಕ ಸುತ್ತಲಿನ ಕಲ್ಲಿನ ಕೋಟೆ ಗೋಡೆಯ ಒಂದು ಭಾಗ ಶುಕ್ರವಾರ ಬೆಳಿಗ್ಗೆ ಕುಸಿದು ಬಿದ್ದಿದೆ. ಕಲ್ಲುಗಳಿಂದ ನಿರ್ಮಿಸಿದ್ದ ಗೋಡೆಯ ಒಂದು ಭಾಗ ಭಾಗಶಃ ಕುಸಿದಿದ್ದು, ಪುರಾತನ ಗೋಡೆಯಾಗಿರುವುದರಿಂದ ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಅಳಿಯ ರಾಮರಾಯನ ಅರಮನೆ ಕೋಟೆಯ ಹೊರ ಭಾಗದ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ಇದರಿಂದ ಕೋಟೆ ಆವರಣದಲ್ಲಿನ ಸ್ಮಾರಕಗಳಿಗೆ ಹಾನಿಯಾಗಿಲ್ಲ. ಒಂದು ವೇಳೆ ಗೋಡೆ ಕೋಟೆಯ ಒಳಭಾಗದಲ್ಲಿ ಬಿದ್ದಿದ್ದರೆ ಒಳಭಾಗದಲ್ಲಿದ್ದ ಪುರಾತನ ಕಾಲುವೆಗೆ ಹಾನಿಯಾಗುವ ಸಂಭವವಿತ್ತು ಎಂದು ಹೇಳಲಾಗಿದೆ.

ಕೋಟೆ ಹಳೆಯದಾದ್ದರಿಂದ ಮತ್ತು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಗೊಂಡಿತ್ತು. ಅಲ್ಲದೆ ಕೋಟೆಯ ಸುತ್ತಮುತ್ತ ನಡೆಯುತ್ತಿದ್ದ ಕಲ್ಲುಗಣಿಗಾರಿಕೆಗಳಿಂದಾಗಿ ಕೋಟೆಯ ಸುರಕ್ಷತೆಗೆ ಆತಂಕ ಎದುರಾಗಿತ್ತು, ಗಣಿಗಳಲ್ಲಿ ನಡೆಯುತ್ತಿದ್ದ ಸ್ಫೋಟಗಳಿಂದಾಗಿ ಕೋಟೆಯ ಗೋಡೆಗಳಿಗೆ ಹಾನಿಯಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

RELATED TOPICS:
English summary :Monument-Fort-Collapsed In Historical-Hampi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...