Thu,Apr25,2024
ಕನ್ನಡ / English

ಯುವತಿಯೊಂದಿಗಿನ ಖಾಸಗಿ ವಿಡಿಯೋ ವೈರಲ್‌ ಮಾಡುವುದಾಗಿ ಯುವಕನಿಗೆ ಬೆದರಿಕೆ! | Janata news

13 Mar 2021
1833

ಹುಬ್ಬಳ್ಳಿ : ಪ್ರೇಮಿಗಳಿಬ್ಬರ ಖಾಸಗಿ ವೀಡಿಯೋ ತೋರಿಸಿ ಬೆದರಿಸಿ ಬ್ಲಾಕ್ ಮೇಲ್ ಮಾಡಿದ್ದಲ್ಲದೇ ಯುವಕನನ್ನು ಥಳಿಸಿದ ರೌಡಿ ಗ್ಯಾಂಗ್ ವಿರುದ್ಧ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹಲ್ಲೆಗೊಳಗಾದ ಹುಬ್ಬಳ್ಳಿಯ ಕುಮಾರಸ್ವಾಮಿ ಕೊಡಗಿಮಠ(22)ಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾವೇರಿ ಪಾಟೀಲ್‌ ಎಂಬ ಯುವತಿಯನ್ನ ಕುಮಾರಸ್ವಾಮಿ ಕೊಡಗಿಮಠ ಪ್ರೀತಿಸುತ್ತಿದ್ದನು. ಶುಕ್ರವಾರ ಸಂಜೆ ಕಾವೇರಿ, ಕುಮಾರಸ್ವಾಮಿ ಹುಬ್ಬಳ್ಳಿ ಬಳಿ ಭೇಟಿಯಾಗಿ ಮಾತನಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ಆತನನ್ನು ಅಪಹರಿಸಿದ್ದಾರೆ. ನಂತರ ತನ್ನನ್ನು ರೂಮ್‌ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಯುವಕ ಆರೋಪಿಸಿದ್ದಾನೆ.

ಖಾಸಗಿ ವಿಡಿಯೋವನ್ನು ಮಾಧ್ಯಮಗಳಿಗೆ ನೀಡುತ್ತೇವೆ ಇಲ್ಲದಿದ್ದರೆ ಐದು ಲಕ್ಷ ಹಣ ನೀಡುವಂತೆ ಯುವಕನ ಸ್ನೇಹಿತರ ಮೂಲಕ‌ ರೌಡಿಗಳು ಕುಟುಂಬದವರಿಗೆ ಬೆದರಿಕೆ ಹಾಕಿದ್ದಾರೆ.

ಕುಮಾರಸ್ವಾಮಿ ಎಂಬ ಯುವಕ ತನ್ನ ಪ್ರೇಯಿಸಿ ಜೊತೆಗಿದ್ದಾಗ ಅಕ್ಷಯ ಪಾರ್ಕ್ ನಿವಾಸಿಗಳಾದ ಶಕ್ತಿರಾಜ ದಾಂಡೇಲಿ ಸೇರಿದಂತೆ ಹಲವರು ವೀಡಿಯೋ ಶೂಟ್ ಮಾಡಿದ್ದಾರೆ. ಘಟನೆಯ ಕುರಿತು ಹಲ್ಲೆಗೊಳಗಾದ ಕುಮಾರಸ್ವಾಮಿ ತಾಯಿ ಹುಬ್ಬಳ್ಳಿಯ ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹೊಸೂರಿನ ರೌಡಿ ಗ್ಯಾಂಗ್ ಶಕ್ತಿ ದಾಂಡೇಲಿ ಹಾಗೂ ಆತನ ಸಹಚರರಿಂದ ಬ್ಲಾಕ್‌ಮೈಲ್‌, ಹಲ್ಲೆ ನಡೆದಿದೆ ಎಂದು ಯುವಕ ಆರೋಪಿಸಿದ್ದಾನೆ. ಶಕ್ತಿ ದಾಂಡೇಲಿ,ರಾಹುಲ್ ಪ್ರಭು, ಸಂತೋಷ ಬ್ಯಾಹಟ್ಟಿ,‌ ಮಂಜು, ಸೇರಿದಂತೆ 10 ಜನರ ವಿರುದ್ಧ ಈ ಸಂಬಂಧ ಎಫ್.ಐ.ಆರ್. ದಾಖಲಾಗಿದೆ.

RELATED TOPICS:
English summary :Hubli

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...