Mon,May06,2024
ಕನ್ನಡ / English

ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಪಕ್ಷ ಸೇರಿದ ಎರಡೇ ದಿನಕ್ಕೆ ಟಿಎಂಸಿ ರಾಜ್ಯ ಉಪಾಧ್ಯಕ್ಷ | Janata news

15 Mar 2021
1459

ಕೋಲ್ಕೊತ್ತಾ : ಅವರು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾದ ಎರಡು ದಿನಗಳ ನಂತರ, ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅವರನ್ನು ಸೋಮವಾರ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಿದೆ. ಅವರನ್ನು ಟಿಎಂಸಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿಯೂ ಮಾಡಲಾಗಿದೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದ ಯಶ್ವಂತ್ ಸಿನ್ಹಾ ಅವರು ಶನಿವಾರ ಟಿಎಂಸಿಗೆ ಸೇರಿದ ದಿನವೇ ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ, ಸಿನ್ಹಾ ಅವರು ಸಕ್ರಿಯ ಪಕ್ಷದ ರಾಜಕೀಯಕ್ಕೆ ಮರಳಲು ನಂದಿಗ್ರಾಮ್ ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯೇ, ಪ್ರಮುಖ ಕಾರಣ ಎಂಬಂತೆ ಅವರು ಹೇಳಿದರು.

ಮಾರ್ಚ್ 10ರಂದು ನಂದಿಗ್ರಾಮ್ ನಲ್ಲಿ ಪ್ರಚಾರ ನಡೆಸುತ್ತಿದ್ದಾಗ ರಸ್ತೆಯಲ್ಲಿದ್ದ ಕಂಬಕ್ಕೆ ಮಮತಾ ಅವರ ಕಾರಿನ ಬಾಗಿಲು ಬಡಿದ ಪರಿಣಾಮ, ಘಟನೆಯಲ್ಲಿ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದು, ಈ ಘಟನೆಯು ಆಳವಾಗಿ ಬೇರೂರಿರುವ ಪಿತೂರಿ, ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಚುನಾವಣಾ ಆಯೋಗವು ತನ್ನ ಪ್ರಾಥಮಿಕ ವರದಿಯಲ್ಲಿ ಬ್ಯಾನರ್ಜಿಯ ಮೇಲಿನ ಯಾವುದೇ ದಾಳಿ ನಡೆದಿರುವ ಕುರಿತಾದ ಆರೋಪವನ್ನು ತಳ್ಳಿಹಾಕಿದೆ.

ನಂದಿಗ್ರಾಮ್ ನಲ್ಲಿಂದ ಮಮತಾ ಅವರು ನಾಮಪತ್ರ ಸಲ್ಲಿಸಿದ್ದಾರೆ ಮತ್ತು ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿ ಮುಖಂಡ ಸುವೆಂದು ಅಧಿಕಾರಿಯ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಟಿಎಂಸಿ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿನ್ಹಾ, ಈ ಸರ್ಕಾರ(ಬಿಜೆಪಿ) ಚುನಾವಣೆಯಲ್ಲಿ ಗೆಲ್ಲಲು ಏನು ಬೇಕಾದರೂ ಮಾಡಬಹುದು. ಮಮತಾ ಜಿ ಮೇಲಿನ ದಾಳಿಯು ನಾನು ಅವರೊಂದಿಗೆ ಕೆಲಸ ಮಾಡಲು ಬಯಕೆಯನ್ನು ಹೆಚ್ಚಿಸಿ ನಿರ್ಧಾರ ಕೈಗೊಂಡಿದ್ದೇನೆ, ಎಂದು ಹೇಳಿದರು. ದೇಶದಲ್ಲಿ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಅವರು ಹೇಳಿದರು, ಮತ್ತು ಟಿಎಂಸಿ ಮತದಾನವನ್ನು ಬಹುಮತದಿಂದ ಗೆಲ್ಲುವಂತೆ ನೋಡಿಕೊಳ್ಳುವುದು ಸಮಯದ ಅಗತ್ಯವಾಗಿದೆ, ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ತಿಂಗಳಿಂದ 8 ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಶತಾಯಗತಾಯ ಪ್ರಯತ್ನ ಮಾಡುತ್ತಿರುವ ತೃಣಮೂಲ ಕಾಂಗ್ರೆಸ್ ತನ್ನ ರಾಜ್ಯ ಉಪಾಧ್ಯಕ್ಷರನ್ನಾಗಿ ಯಶವಂತ ಅವರನ್ನು ನೇಮಿಸಿದೆ.

83 ವರ್ಷ ವಯಸ್ಸಿನ ಯಶಸ್ಸಿನ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಂದ ಎನ್‌ಡಿಎ ಸರ್ಕಾರದಲ್ಲಿ ವಯಸ್ಸಿನ ಆಧಾರದ ಮೇಲೆ ಅವರನ್ನು ಸರ್ಕಾರದ ಆಡಳಿತದಿಂದ ದೂರ ಇಡಲಾಗಿತ್ತು. ಹಾಗೂ ಸರ್ಕಾರದ ನಡೆಯ ವಿರುದ್ಧ ಸಿನ್ಹಾ ಅವರು ಈ ಮೊದಲು ಅನೇಕ ಬಾರಿ ಧ್ವನಿಯೆತ್ತಿದ್ದರು.

RELATED TOPICS:
English summary :Former finance min. Yashwant Sinha becomes vice president of TMC in two days after joining party

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...