Sat,May18,2024
ಕನ್ನಡ / English

ಹಳೆಯ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಕಟಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ : ನೀತಿಯ ವಿವರ | Janata news

18 Mar 2021
1274

ನವದೆಹಲಿ : ಲೋಕಸಭೆಯಲ್ಲಿ ಬಹುನಿರೀಕ್ಷಿತ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇಂದು ಗುರುವಾರ ಲೋಕಸಭೆಯಲ್ಲಿ ಪ್ರಕಟಿಸಿದ್ದಾರೆ. ಹಳೆಯ ಮತ್ತು ದೋಷಯುಕ್ತ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವುದು, ವಾಯು ಮಾಲಿನ್ಯಕಾರಕ ವಾಹನಗಳನ್ನು ಕಡಿಮೆಗೊಳಿಸುವುದು, ರಸ್ತೆ ಮತ್ತು ವಾಹನ ಸುರಕ್ಷತೆಯನ್ನು ಸುಧಾರಿಸುವ ಉದ್ದೇಶವನ್ನು ಈ ನೀತಿ ಹೊಂದಿದೆ, ಎಂದು ಗಡ್ಕರಿ ಹೇಳಿದರು.

ವಾಹನಗಳನ್ನು ಗುಜರಿಗೆ ಹಾಕುವ ನೀತಿಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಉತ್ತರಿಸಿದ ಅವರು, ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡುವ ಇದು ಎಲ್ಲರಿಗೂ ಲಾಭದಾಯಕ ನೀತಿಯಾಗಿದೆ, ಎಂದು ಸಾರಿಗೆ ಸಚಿವರು ಹೇಳಿದರು, ಮರುಬಳಕೆ ಮಾಡುವುದರಿಂದ ವಾಹನ ಉದ್ಯಮಕ್ಕೆ ಸಾಮಗ್ರಿಗಳ ವೆಚ್ಚ ಕಡಿಮೆಯಾಗುತ್ತದೆ, ಎಂದಿದ್ದಾರೆ.

ರದ್ದುಗೊಳಿಸಿದ ವಾಹನಗಳ ಬದಲಿಗೆ ಹೊಸ ವಾಹನಗಳನ್ನು ಖರೀದಿಸಲು ರಾಜ್ಯಗಳು ನೋಂದಣಿ ಮತ್ತು ರಸ್ತೆ ತೆರಿಗೆಗಳಲ್ಲಿ ರಿಯಾಯಿತಿ ನೀಡಬಹುದು, ಎಂದು ಅವರು ಹೇಳಿದರು.

ಫಿಟ್‌ನೆಸ್ ಪರೀಕ್ಷೆಯಲ್ಲಿ ವಿಫಲವಾದ ಅಥವಾ ಅದರ ನೋಂದಣಿ ಪ್ರಮಾಣಪತ್ರವನ್ನು ನವೀಕರಿಸಲು ವಿಫಲವಾದ ವಾಹನವನ್ನು, ಎಂಡ್ ಆಫ್ ಲೈಫ್ ವೆಹಿಕಲ್, ಎಂದು ಘೋಷಿಸಬಹುದಾಗಿ ತಿಳಿಸಿದ್ದಾರೆ.

ವಾಹನಗಳನ್ನು ಗುಜರಿಗೆ ಹಾಕುವ ನೀತಿಯಿಂದ ಲಾಭವೇ ಹೆಚ್ಚು. ಈ ನೀತಿಯು ಇಂಧನ ಕ್ಷಮತೆಯನ್ನು ಹೆಚ್ಚಿಸುವ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ನೆರವಾಗುತ್ತದೆ, ಎಂದು ಸಚಿವರು ಹೇಳಿದರು.

ಹಳೆಯ ವಾಹನವನ್ನು ಸ್ಕ್ರ್ಯಾಪ್ ಮಾಡಿದ್ದಲ್ಲಿ ವಾಹನ ಮಾಲೀಕರು ಹೆಚ್ಚಿನ ಲಾಭವನ್ನು ಪಡೆಯಬಹುದು.

- ಸ್ಕ್ರ್ಯಾಪಿಂಗ್ ಕೇಂದ್ರದಿಂದ ಗ್ರಾಹಕರು ಹಳೆಯ ವಾಹನಕ್ಕೆ ಸ್ಕ್ರ್ಯಾಪ್ ಮೌಲ್ಯವನ್ನು ಪಡೆಯುತ್ತಾರೆ, ಇದು ಆ ವಾಹನದ ಎಕ್ಸ್ ಶೋರೂಂ ಬೆಲೆಯ ಸರಿಸುಮಾರು ಶೇಕಡಾ 4-6ರಷ್ಟು ಇರಲಿದೆ.

- ವೈಯಕ್ತಿಕ ವಾಹನಗಳಿಗೆ ಶೇ25 ರಷ್ಟು ಮತ್ತು ವಾಣಿಜ್ಯ ವಾಹನಗಳಿಗೆ ಶೇ15 ರವರೆಗೆ ರಸ್ತೆ ತೆರಿಗೆ ರಿಯಾಯಿತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಬಹುದು.

- ಸ್ಕ್ರ್ಯಾಪಿಂಗ್ ಪ್ರಮಾಣಪತ್ರದ ಬದಲಿಗೆ ಹೊಸ ವಾಹನ ಖರೀದಿ ಸಂದರ್ಭದಲ್ಲಿ ಶೇ5 ರಷ್ಟು ರಿಯಾಯಿತಿ ನೀಡುವಂತೆ ವಾಹನ ತಯಾರಕರಿಗೆ ಸೂಚಿಸಲಾಗಿದೆ.

- ಹೆಚ್ಚುವರಿಯಾಗಿ, ಸ್ಕ್ರ್ಯಾಪಿಂಗ್ ಪ್ರಮಾಣಪತ್ರದ ವಿರುದ್ಧ ಹೊಸ ವಾಹನವನ್ನು ಖರೀದಿಸಲು ನೋಂದಣಿ ಶುಲ್ಕವನ್ನು ಸಹ ಮನ್ನಾ ಮಾಡಬಹುದು.

ಈ ನೀತಿ ಜಾರಿಗೆ ಬಂದ ನಂತರ ಹೊಸ ವಾಹನಗಳ ಖರೀದಿಯಲ್ಲಿ ಹೆಚ್ಚಳ ಕಂಡುಬರುವುದು. ಇದರಿಂದ ಜಿಎಸ್‌ಟಿ ಸಂಗ್ರಹದಿಂದಾಗುವ ಆದಾಯದಲ್ಲಿಯೂ ಹೆಚ್ಚಳವಾಗುವುದು, ಎಂದೂ ಸಚಿವ ಗಡ್ಕರಿ ಹೇಳಿದರು.

RELATED TOPICS:
English summary :Union Min Nitin Gadkari announced vehicle scrappage policy : Policy details

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...