Wed,May01,2024
ಕನ್ನಡ / English

ಕಲಾಪ ಮುಂದೂಡಿದರೂ ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ, ರಾತ್ರಿ ವಿಧಾನಸೌಧಕ್ಕೆ ದೌಡಾಯಿಸಿದ ಸಿಎಂ! | Janata news

19 Mar 2021
837

ಬೆಂಗಳೂರು : ರಾಜ್ಯ ಸರಕಾರವು ತಮ್ಮ ಕ್ಷೇತ್ರಗಳಿಗೆ ಅನುದಾನ ತಡೆ ಹಿಡಿದಿದೆ ಎಂದು ಸಿಟ್ಟಿಗೆದ್ದ ಜೆಡಿಎಸ್ ಶಾಸಕರು, ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಗುರುವಾರ ಧರಣಿ ನಡೆಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ನೀಡಿದ ಉತ್ತರವನ್ನು ಪ್ರತಿಭಟಿಸಿ, ಶಾಸಕರು ಧರಣಿ ನಡೆಸಿದರು. ಅಲ್ಲದೆ, ಸ್ಪೀಕರ್ ಸದನವನ್ನು ನಾಳೆಗೆ ಮುಂದೂಡಿದರೂ, ರಾಜ್ಯ ಸರಕಾರದಿಂದ ಸೂಕ್ತ ಉತ್ತರ ಸಿಗುವವರೆಗೆ ನಾವು ಧರಣಿ ಹಿಂಪಡೆಯುವುದಿಲ್ಲ. ಅಹೋರಾತ್ರಿ ಧರಣಿ ನಡೆಸುವುದಾಗಿ ಜೆಡಿಎಸ್ ಶಾಸಕರು ಪಟ್ಟು ಹಿಡಿದಿದ್ದರು.

ವಿಧಾನಸಭೆ ಸಭಾಂಗಣದಲ್ಲಿ ಅಹೋರಾತ್ರಿ ಧರಣಿಗೆ ಮುಂದಾದ ಜೆಡಿಎಸ್ ಶಾಸಕರ‌ ಮನವೊಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ನಾರಾಯಣ ಗೌಡ ರಾತ್ರಿ ಎಂಟು ಗಂಟೆಗೆ ವಿಧಾನಸೌಧಕ್ಕೆ ದೌಡಾಯಿಸಿದ ಪ್ರಸಂಗ ನಡೆಯಿತು.

ಮುಖ್ಯಮಂತ್ರಿಯೊಂದಿಗೇ ಜೆಡಿಎಸ್ ಶಾಸಕರು ವಿಧಾನಸಭೆಯಿಂದ ಹೊರಗೆ ಬಂದರು. ಯಡಿಯೂರಪ್ಪ ಭೇಟಿಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ ಎಚ್​.ಡಿ.ರೇವಣ್ಣ, ಮೈತ್ರಿ ಸರ್ಕಾರದ ಅವಧಿಯಲ್ಲಿ ಶುರುವಾದ ಕೆಲಸಗಳು ಮುಗಿಯಬೇಕು. ಪ್ರತಿಪಕ್ಷಗಳ ಶಾಸಕರು ಇರುವ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡಬೇಕು. ಧರಣಿ ನಡೆಸುವ ಹಿಂದೆ ನಮಗೆ ಬೇರೆ ಯಾವುದೇ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಂಜೂರಾಗಿ, ಟೆಂಡರ್ ಆಗಿದ್ದ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ಹಣಕಾಸು‌ ಕೊರತೆಯಿಂದ ತಡೆಹಿಡಿಯಲಾದ ಯೋಜನೆಗೆ ಆದ್ಯತೆ ಮೇಲೆ ಅನುದಾನ‌ ಬಿಡುಗಡೆ ಮಾಡುವುದಾಗಿ ಸಿಎಂ‌ ಜೆಡಿಎಸ್ ಶಾಸಕರಿಗೆ ಭರವಸೆ ನೀಡಿದರು.

janata

RELATED TOPICS:
English summary :Bangalore

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...