Sun,May19,2024
ಕನ್ನಡ / English

ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ: ಹೆಚ್​.ಡಿ.ಕುಮಾರಸ್ವಾಮಿ | Janata news

21 Mar 2021
1851

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸದ್ಯದ ಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು ಎಂಬ ರಾಜ್ಯದ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಅವರ ಹೇಳಿಕೆಗೆ, ರೈತರ ಕಷ್ಟ ನೀಗಿಸಬೇಕಾದವರ ಬೇಜವಾಬ್ದಾರಿಯುತ ಹೇಳಿಕೆ ಇದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಲು 1ರಿಂದ2 ಲಕ್ಷ ರೂಪಾಯಿ ವ್ಯಯಿಸಬೇಕು. ಪಿವಿಸಿ ಪೈಪ್‌ಗಳ ಬೆಲೆ ದುಪ್ಪಟ್ಟಾಗಿದೆ. ಮೋಟರ್ ಬೆಲೆಯೂ ಏರಿದೆ. ಕೃಷಿ ಪಂಪ್‌ಸೆಟ್‌ಗಾಗಿ ಶೇ.18ರಷ್ಟು ಜಿಎಸ್‌ಟಿ ಪಾವತಿಸ ಬೇಕು. ರೈತರೇ ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾಧಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂದು ಅವಲೋಕನೆಯಾಗಬೇಕಿದೆ ಎಂದು ಟ್ವೀಟ್​ನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ- ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು, ಎಂದಿದ್ದಾರೆ. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ. ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ? ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ಏಕಗವಾಕ್ಷಿ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ಮಹಾನಾಯಕ-ಏಕಗವಾಕ್ಷಿ ಬಗ್ಗೆ ಮೋದಿ ಮಾತಾಡುವರೇ? ಎಂದು ಕೇಳಿದ್ದಾರೆ.

ಕರ್ನಾಟಕ ಸರ್ಕಾರದಲ್ಲೇ ಏಕಗವಾಕ್ಷಿಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ಏಕಗವಾಕ್ಷಿ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಸಲಹೆ ಇತ್ತಿದ್ದಾರೆ.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...