Sun,May05,2024
ಕನ್ನಡ / English

ಆನ್‌ಲೈನ್‌ ಕೋಚಿಂಗ್: ಗೆಟ್‌-ಸೆಟ್‌ ಗೋ ವ್ಯವಸ್ಥೆಗೆ ಸಿಎಂ ಚಾಲನೆ | Janata news

22 Mar 2021
3317

ಬೆಂಗಳೂರು : ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ ಗೆಟ್‌-ಸೆಟ್‌ ಗೋ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಚಾಲನೆ ನೀಡಿದರು.

ಗೆಟ್‌-ಸೆಟ್‌ ಗೋ ವ್ಯವಸ್ಥೆಗೆ ವಿಧಾನಸೌಧದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ತರಬೇತಿ ನೀಡಲಾಗುವುದು. ಇದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಸೌಲಭ್ಯವನ್ನು ಅಭ್ಯರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಇಡೀ ವರ್ಷಪೂರ್ತಿ ಗೆಟ್‌ ಸೆಟ್‌ ಗೋ ಮೂಲಕ ಕೋಚಿಂಗ್‌ ವ್ಯವಸ್ಥೆ ಇರಲಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆ ಕೈಗೊಂಡಿರುವ ಈ ಉಪಕ್ರಮದಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಜತೆಗೆ ಸಮಗ್ರ ಕಲಿಕಾ ವ್ಯವಸ್ಥೆ‌ (ಎಲ್‌ಎಂಎಸ್) ಕೂಡ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ, ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಕೈಗೊಂಡ ಕ್ರಮಗಳು ಮೆಚ್ವುವಂತಹದ್ದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಐಐಟಿಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಪ್ರಮಾಣ ಹೆಚ್ಚಿಸುವ ಗುರಿಯೊಂದಿಗೆ ಈ ಹೆಜ್ಜೆ ಇಡಲಾಗುತ್ತಿದೆ. ಜೆಇಇ, ನೀಟ್‌ ಪರೀಕ್ಷೆಗಳಲ್ಲಿ ಕನ್ನಡ ವಿದ್ಯಾರ್ಥಿಗಳು ಹೆಚ್ಚು ರ್ಯಾಂಕ್ ಪಡೆಯುವ ನಿಟ್ಟಿನಲ್ಲಿ ಇದು ಸಹಕಾರಿ ಆಗಲಿದೆ. ಯಾವ ವಿದ್ಯಾರ್ಥಿಯೂ ಆರ್ಥಿಕ ಮುಗ್ಗಟ್ಟಿಗೆ ಸಿಲುಕದಂತೆ ವರ್ಷವಿಡೀ ಗೆಟ್‌ ಸೆಟ್‌ ಗೋ ಮೂಲಕ ಅಧ್ಯಯನ ಮಾಡಬಹುದು ಎಂದು ಡಿಸಿಎಂ ಹೇಳಿದರು.

ಕಲಿಕೆ, ಪರಿಷ್ಕರಣೆ ಹಾಗೂ ಪರೀಕ್ಷೆ ಪರಿಕಲ್ಪನೆಯಲ್ಲಿ ಗೆಟ್‌ ಸೆಟ್‌ ಗೋ ಕೋಚಿಂಗ್‌ ವ್ಯವಸ್ಥೆ ರೂಪಿಸಲಾಗಿದೆ. ಇದರಲ್ಲಿ ನೀಟ್‌, ಜೆಇಇ, ಸಿಇಟಿ ಪರೀಕ್ಷಾರ್ಥಿಗಳಿಗೆ ಅತ್ಯಗತ್ಯವಾದ ಅಧ್ಯಯನ ಸಾಮಗ್ರಿ ಜತೆಗೆ ವಿಡಿಯೋಗಳು, ಪಠ್ಯ ಸಾರಾಂಶ, ಸಂವಾದಾತ್ಮಕ ಪರೀಕ್ಷೆಗಳು ಇರುತ್ತವೆ. ಇಡೀ ದೇಶದಲ್ಲಿಯೇ ವಿದ್ಯಾರ್ಥಿಗಳಿಗಾಗಿ ಇಂಥ ಉಪಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ಕ್ಲಾಸ್‌ ಕಡ್ಡಾಯವಲ್ಲ, ಆಫ್‌ಲೈನ್‌ ಅಥವಾ ಆನ್‌ಲೈನ್‌ನಲ್ಲೂ ಹಾಜರಾಗಬಹುದು. ಆದರೆ, ಹಾಜರಾತಿ ಕಡ್ಡಾಯ. ಆಯಾ ಶಿಕ್ಷಣ ಸಂಸ್ಥೆಗಳು ಇನ್ನೂ ಉತ್ತಮವಾಗಿ ಕೋವಿಡ್‌ ಪರಿಸ್ಥಿತಿಯನ್ನು ನಿಭಾಯಿಸಬೇಕು. ಪರಿಣಾಮಕಾರಿಯಾಗಿ ಪರೀಕ್ಷೆ ಮಾಡಬೇಕು. ಸ್ಯಾನಿಟೈಸೇಷನ್‌, ಮಾಸ್ಕ್‌, ದೈಹಿಕ ಅಂತರ ಕಾಪಾಡಿಕೊಳ್ಳುವತ್ತ ಹೆಚ್ಚು ನಿಗಾ ಇಡಬೇಕು ಎಂದು ಸಲಹೆ ಮಾಡಿದರು.

ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ವ್ಯತ್ಯಯ ಆಗಬಾರದು. ಪರಿಸ್ಥಿತಿ ಎದುರಿಸಲು ಶಿಕ್ಷಣ ಸಂಸ್ಥೆಗಳು ಎಲ್ಲ ತಯಾರಿ ಮಾಡಿಕೊಳ್ಳಬೇಕು. ಈಗಾಗಲೇ ವ್ಯಾಕ್ಸಿನ್‌ ಬಂದಿದೆ. ಎರಡನೇ ಅಲೆ ಎದ್ದಿದೆ ಎನ್ನುವ ಕಾರಣಕ್ಕೆ ಆಫ್‌ಲೈನ್‌ ತರಗತಿಗಳನ್ನು ಸ್ಥಗಿತ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

RELATED TOPICS:
English summary :BSYediyurappa

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...