Fri,May10,2024
ಕನ್ನಡ / English

ಹೆದ್ದಾರಿಯಲ್ಲಿ ದರೋಡೆ, ಜನ ಸಂದಣಿ ಪ್ರದೇಶದಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮರ ತಂಡ ಭೇದಿಸಿದ ಪೊಲೀಸರು | Janata news

22 Mar 2021
1843

ಕಾರವಾರ :

ನಗರವ್ಯಾಪ್ತಿ ಹಾಗೂ ರಾಜ್ಯದ ಇತರೇ ಕಡೆಗಳಲ್ಲಿ ಹೆದ್ದಾರಿ ರಸ್ತೆಯಲ್ಲಿ ಪ್ರಯಾಣಿಕರನ್ನು ಹೆದರಿಸಿ ದರೋಡೆ ಮಾಡುತ್ತಿದ್ದ ಹಾಗೂ ಜಾತ್ರೆ, ಸಂತೆಯಂತಹ ಜನ ಸಂದಣಿ ಪ್ರದೇಶದಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಭದ್ರಾವತಿ ಹಾಗೂ ಶಿಕಾರಿಪುರದ 7 ಜನ ಕಳ್ಳರ ತಂಡವನ್ನು ಭೇದಿಸಿದ್ದು, ಒರ್ವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಳಿಯೂರ ಹೊಸ್ಕೆರಿ ನಿವಾಸಿ ಆಸಿಫ್(35) ತಂದೆ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಸೇರಿದಂತೆ ಏಳು ಜನರು ಒಂದು ತಂಡ ರಚಿಸಿಕೊಂಡು ಕೆಎ 02, ಎಮ್.ಎಚ್4151 ಸಂಖ್ಯೆಯ ಕಾರ್‌ನಲ್ಲಿ ಶಿಕಾರಿಪುರದಿಂದ ಕಾರವಾರಕ್ಕೆ ಬಂದಿದ್ದಾರೆ. ನಂತರದಲ್ಲಿ ಕಾರವಾರ ಹಾಗೂ ಗೋವಾ ಕಡೆಗಳಲ್ಲಿ ರಾತ್ರಿ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ವಾಹನಗಳಲ್ಲಿ ಓಡಾಡುವ ಜನರ ಬಳಿಯಿರುವ ಹಣ, ಬಂಗಾರದ ಆಭರಣಗಳು ಹಾಗೂ ಮೊಬೈಲ್‌ಗಳನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದರು ಎಂದರು.

ಕಾರವಾರದ ಬೈತಖೊಲ್‌ನ ಸಿದ್ದರಾಮೇಶ್ವರ ಮಠದ ಬಳಿಯ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಏಳು ಜನ ಕಳ್ಳರ ತಂಡ ಭಾನುವಾರ ರಾತ್ರಿ ಹಾಗೂ ಸೋಮವಾರದ ಬೆಳಗಿನ ಜಾವ ತಮ್ಮ ಕಾರ್‌ನಲ್ಲಿ ೨ ಕಬ್ಬಿಣದ ಕತ್ತಿ, ೨ ಕಟ್ಟಿಗೆಯ ದೊಣ್ಣೆ, ನೈಲಾನ್ ಹಗ್ಗ, ಖಾರದ ಪುಡಿಯನ್ನು ಇಟ್ಟುಕೊಂಡು ರಸ್ತೆಯಲ್ಲಿ ಓಡಾಡುವ ಜನರನ್ನು ದರೋಡೆ ಮಾಡಲು ನಿಂತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಶಹರ ಪೊಲೀಸ್ ಠಾಣೆ ಪಿಎಸ್‌ಐ ಎಮ್. ಸಂತೋಷ ಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದು, ಐಪಿಸಿ ಸೆಕ್ಷನ್‌ನ ಕಲಂ ೩೯೯, ೪೦೨ರ ಅಡಿ ಪ್ರಕರಣ ದಾಖಲಿಸಿ ಒರ್ವನನ್ನು ಬಂದಿಸಿದ್ದಾರೆ. ಉಳಿದ 6 ಜನರು ತಪ್ಪಿಸಿಕೊಂಡಿದ್ದು, ಆರೋಪಿಗಳ ತಂಡ ದರೋಡೆ ಹಾಗೂ ಕಳ್ಳತನಕ್ಕಾಗಿ ತಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗುವುದು. ಜೊತೆಗೆ ಚುರುಕು ತನಿಖೆ ನಡೆಸಿ ಆದಷ್ಟು ಬೇಗ ತಪ್ಪಿಸಿಕೊಂಡಿರುವ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್‌ಪಿ ಅವರು ತಿಳಿಸಿದರು.

RELATED TOPICS:
English summary :Police traced thieves, highway robbers team

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...