Fri,Apr26,2024
ಕನ್ನಡ / English

130 ಗ್ರಾಹಕರಿಗೆ 12 ಲಕ್ಷ ವಂಚನೆಗೈದ ತಮಿಳುನಾಡು ಮೂಲದ ತಂಡದ ಬಂಧನ | Janata news

22 Mar 2021
2829

ಕಾರವಾರ : ಅಮೋಘ ಟ್ರೇಡರ್ಸ್ ಹೆಸರಿನಲ್ಲಿ ನಗರದ 130 ಗ್ರಾಹಕರಿಂದ 12 ಲಕ್ಷ ಹಣ ಪಡೆದು ವಂಚನೆಗೈದ ತಮಿಳುನಾಡಿನ 6 ಜನ ವಂಚಕರ ಜಾಲವನ್ನು 2017ರ ಬಿಯೂಡಿಎಸ್ ಕಾಯ್ದೆಯಡಿ ಭೇದಿಸಿದ್ದು, ಓರ್ವನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ಜಾರಿಗೊಳಿಸಿರುವ ಬ್ಯಾನ್ಇಂಗ್ ಆಫ್ ಅನ್ ರೆಗ್ಯುಲೇಟೆಡ್ ದೆಪೋಸಿಟ್ಸ ಆಕ್ಟ್ 2017(ಬಿಯೂಡಿಎಸ್) ಅಡಿಯಲ್ಲಿ ಈ ವಂಚನೆಯ ಕುರಿತು ದಾಖಲಾದ ದೂರಿನ ಅನ್ವಯ ವಂಚನೆಗೆ ರೂಪುರೇಷೆ ಹೆಣೆಯುವ ಹಂತದಲ್ಲಿಯೇ ಪ್ರಕರಣವನ್ನು ಭೇದಿಸಿದ ರಾಜ್ಯದಲ್ಲಿಯೇ ಪ್ರಥಮ ಪ್ರಕರಣ ಇದಾಗಿದೆ. ಬಂಧಿತ ವ್ಯಕ್ತಿ ಶಿವರಾಜು ರೆಂಗರಸು(38) ಎಂದು ಗುರುತಿಸಲಾಗಿದ್ದು, ವಂಚನೆ ತಂಡದಲ್ಲಿದ್ದಂತಹ 6 ಜನರೂ ತಮಿಳುನಾಡಿನ ತಂಜಾವೂರಿನವರು, ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದರು.

ಪ್ರಕರಣದ ಹಿನ್ನೆಲೆ:
ಬಂಧಿತ ಆರೋಪಿ ಶಿವರಾಜು ರೆಂಗರಸು, ನಾಸೀರ್ ಮತ್ತು ಗೋವಿಂದರಾಜು ಎಂಬುವರು ಕಾರವಾರದ ಕಾಜುಬಾಗ್‌ದಲ್ಲಿ ಅಂಗಡಿಯನ್ನು ಬಾಡಿಗೆಗೆ ಪಡೆದು 2021ರ ಫೆ. 13ರಿಂದ ಅಮೋಘ ಟ್ರೇಡರ್ಸ್ ಹೆಸರಿನಲ್ಲಿ ಅಂಗಡಿ ಪ್ರಾರಂಭಿಸಿದ್ದಾರೆ. ಅಂಗಡಿಯಲ್ಲಿ ಕೆಲವು ದಿನ ಬಳಕೆಯ ವಸ್ತುಗಳು, ಎಲ್ಲ ಬಗೆಯ ಗೃಹೋಪಯೋಗಿ, ಇಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣಗಳನ್ನು ಜೋಡಿಸಿಟ್ಟು ರಿಯಾಯಿತಿ ದರದಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ಸಾರ್ವಜನಿಕರಿಗೆ ತಿಳಿಸುತ್ತಿದ್ದರು.

ನಂತರ ಅವುಗಳನ್ನು ಶೇ.45ರ ಕಡಿಮೇ ದರಕ್ಕೆ ನೀಡಿವುದಾಗಿ ನಂಬಿಸಿ ಗ್ರಾಹಕರಿಂದ ಮುಂಗಡವಾಗಿ ಹಣವನ್ನು ಪಡೆಯುತ್ತಿದ್ದರು. ಮೊದಲು ಬಂದ ಕೆಲವು ಗ್ರಾಹಕರಿಗೆ ಪ್ರಥಮ ಆಧ್ಯತೆ ಮೇರೆಗೆ ಅತೀ ಕಡಿಮೆ ದರದಲ್ಲಿ ವಸ್ತುಗಳನ್ನು ನೀಡುವುದಾಗಿ ತಿಳಿಸಿ ಜನರಿಂದ ಹಣ ಪಡೆದು ಸ್ವಲ್ಪ ದಿನಗಳ ನಂತರ ಮೊದಲು ಹಣ ನೀಡಿದವರಿಗೆ ವಸ್ತುಗಳನ್ನು ಕೊಟ್ಟು ಜನರನ್ನು ಆಕರ್ಷಿಸುತ್ತಿದ್ದರು. ಹೀಗಾಗಿ ಆರೋಪಿಗಳ ಆಮೀಶಕ್ಕೆ ಒಳಗಾಗಿ ನಗರದ ಸುಮಾರು 130ಕ್ಕೂ ಹೆಚ್ಚಿನ ಗ್ರಾಹಕರು ಸುಮಾರು 12 ಲಕ್ಷ ಹಣವನ್ನು ಆರೋಪಿತರಿಗೆ ನೀಡಿ ವಸ್ತುಗಳನ್ನು ಕಾಯ್ದಿರಿಸಿದ್ದರು. ಆದರೆ ವಂಚಕರು ಗ್ರಾಹಕರಿಂದ ಹಣ ಪಡೆದುಕೊಂಡು ಕಾರವಾರದಿಂದ ಪರಾರಿಯಾಗಿದ್ದರು.

ಈ ರೀತಿ ವಂಚನೆಗೆ ಒಳಗಾದವರ ಪೈಕಿ ನಗರದ ಮಾಡಿಬಾಗ ಕಡವಾಡದ ನಿವಾಸಿ ಸಮರ್ಥ ನೇತಾಳಕರ್ ಎಂಬುವರು ಒಬ್ಬರಾಗಿದ್ದಾರೆ. ವಂಚನೆಗೊಳಗಾದ ಸಮರ್ಥ ನೇತಾಳಕರ್ ಆರೋಪಿಗಳ ಬಳಿ ಗೃಹ ಬಳಕೆಯ ಸೋಫಾ, 2 ಕಬ್ಬಿಣದ ಮಂಚ, ವಾಸಿಂಗ್ ಮಶೀನ್, ಕಪಾಟು ಹಾಗೂ ಇತರೆ ಅಡುಗೆ ಪಾತ್ರೆಗಳನ್ನು ತಂದುಕೊಡುವಂತೆ ಮುಂಗಡವಾಗಿ 1 ಲಕ್ಷ 13ಸಾವಿರ ರೂ. ಹಣವನ್ನು ನೀಡಿದ್ದಾರೆ. ನಂತರ ಆರೋಪಿಗಳು ವಸ್ತುಗಳನ್ನು ತಂದುಕೊಡದೇ ವಂಚಿಸಿದ್ದು, ಈ ಕುರಿತು ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರು ಜನ ವಂಚಿತರ ತಂಡವನ್ನು ಭೇದಿಸಲಾಗಿದ್ದು, ಈ ಪೈಕಿ ಓರ್ವನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ. ಉಳಿದ ಐವರನ್ನೂ ಆದಷ್ಟು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸ್‌ಪಿ ಅವರು ತಿಳಿಸಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಬದರಿನಾಥ, ಪೊಲೀಸ್ ಉಪಾಧೀಕ್ಷಕ ಅರವಿಂದ ಕಲಗುಜ್ಜಿಯವರ ಮಾರ್ಗದರ್ಶನದಲ್ಲಿ ಕಾರವಾರ ವೃತ್ತ ನಿರೀಕ್ಷಕ ಸಂತೋಷ ಶೆಟ್ಟಿ, ಪಿಎಸ್‌ಐಗಳಾದ ಸಂತೋಷ ಕುಮಾರ, ಎಸ್.ಬಿ. ಪೂಜಾರಿ, ಹಾಗೂ ಸಿಬ್ಬಂದಿನ್ನೊಳಗೊಂಡ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಿ ವಂಚಕರ ಜಾಲವನ್ನು ಭೇದಿಸಲಾಗಿದೆ ಎಂದರು.

RELATED TOPICS:
English summary :Fraud team from TamilNadu cheated 130 customer of 12Lakh

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...