Sun,May19,2024
ಕನ್ನಡ / English

ಠಾಕ್ರೆ ಸರ್ಕಾರದಿಂದ ವರ್ಗಾವಣೆ, ಪೋಸ್ಟಿಂಗ್‌ಗಳಲ್ಲಿ ಪ್ರಚಂಡ ಭ್ರಷ್ಟಾಚಾರ : ಕಾಲ್ ಡಾಟಾ ಇಂಟರ್‌ಸೆಪ್ಟ್ ವರದಿ ಬಿಚ್ಚಿಟ್ಟ ಪಡ್ನವಿಸ್ | Janata news

23 Mar 2021
1690

ಮುಂಬೈ : ಪೊಲೀಸ್ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿರುವ ಬಗ್ಗೆ ಆಡಿಯೊ ಪ್ರತಿಬಂಧಗಳನ್ನು ಒಳಗೊಂಡ ದೋಷಾರೋಪಣೆ ಮಾಡುವ ರಾಜ್ಯ ಗುಪ್ತಚರ ಇಲಾಖೆ ವರದಿಯನ್ನು ದೇವೇಂದ್ರ ಫಡ್ನವೀಸ್ ಬಿಡುಗಡೆ ಮಾಡಿದ್ದಾರೆ.

ತನ್ನ ಸರ್ಕಾರವನ್ನು ಉಳಿಸಲು ಉದ್ಧವ್ ಠಾಕ್ರೆ ಈ ಸಂಪೂರ್ಣ ದಂಧೆಯನ್ನು ಮರೆಮಾಚಿದ್ದಾರೆ ಮತ್ತು ರಕ್ಷಿಸಿದ್ದಾರೆ ಎಂದು ತೋರುತ್ತದೆ, ಎಂದು ಅವರು ಮಂಗಳವಾರ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸರ್ಕಾರವನ್ನು ಉಳಿಸುವ ಉದ್ದೇಶದಿಂದ ತಮ್ಮ ಗಮನಕ್ಕೆ ತಂದ ಪೊಲೀಸ್ ಅಧಿಕಾರಿಗಳ ವರ್ಗಾವಣೆಯ ದಂಧೆಗೆ ಸಂಬಂಧಿಸಿದ ವರದಿಯ ಕುರಿತು ಯಾವುದೇ ಕ್ರಮ ಕೈಗೊಳ್ಳದೇ ಇರಲು ನಿರ್ಧರಿಸಿದ್ದಾರೆ, ಎಂದು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಆರೋಪಿಸಿದರು.

ಸಾಮಾನ್ಯ ಆಡಳಿತ ಇಲಾಖೆ(ಜಿಎಡಿ) ಅವರ ಅಧಿಕಾರ ವ್ಯಾಪಿಯಲ್ಲಿದ್ದರೂ, ಮುಖ್ಯಮಂತ್ರಿ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವರದಿಯು ಆಗಸ್ಟ್ 2020ರಿಂದ ಸರ್ಕಾರದ ಬಳಿಯಲ್ಲೇ ಇದೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಎಂದಿದ್ದಾರೆ.

6.3 ಜಿಬಿ ಕಾಲ್ ಡಾಟಾ ಇಂಟರ್‌ಸೆಪ್ಟ್ ಅನ್ನು ಒಳಗೊಂಡಿರುವ ವರದಿಯ ಪ್ರತಿ ತನ್ನ ಬಳಿ ಇದೆ, ಎಂದು ಫಡ್ನವೀಸ್ ಹೇಳಿದ್ದಾರೆ, ಇದನ್ನು ಅವರು ಕೇಂದ್ರ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ತನಿಖೆಗಾಗಿ ಕೇಂದ್ರ ಗೃಹ ಕಾರ್ಯದರ್ಶಿಗೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಕಾಲ್ ಡಾಟಾ ಇಂಟರ್‌ಸೆಪ್ಟ್‌ನಲ್ಲಿ ಹಿರಿಯ ಐಪಿಎಸ್ ಮತ್ತು ಐಪಿಎಸ್ ಅಲ್ಲದ ಅಧಿಕಾರಿಗಳು, ಕಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳ ಹೆಸರುಗಳಿವೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಪಡ್ನವಿಸ್ ಹೇಳಿದ್ದಾರೆ. ಆಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಗೃಹ) ಸೀತಾರಾಮ್ ಕುಂಟೆ ಅವರ ಅನುಮತಿಯ ನಂತರ ಫೋನ್ ಟ್ಯಾಪಿಂಗ್ ಮಾಡಲಾಗಿದೆ.

ಇಂಟರ್‌ಸೆಪ್ಟ್ ಕಾಲ್ ಡೇಟಾದ ವರದಿಯನ್ನು 2020 ರ ಆಗಸ್ಟ್ 25ರಂದು ಗುಪ್ತಚರ ಆಯುಕ್ತ ರಶ್ಮಿ ಶುಕ್ಲಾ ಅವರು ಪೊಲೀಸ್ ಮಹಾನಿರ್ದೇಶಕ(ಡಿಜಿ) ಸುಬೋಧ್ ಜೈಸ್ವಾಲ್ ಅವರಿಗೆ ಸಲ್ಲಿಸಿದರು, ಅವರು 2020ರ ಆಗಸ್ಟ್ 26ರಂದು ಎಸಿಎಸ್(ಗೃಹ)ಗೆ ಸಲ್ಲಿಸಿದರು.

ಡಿಜಿ ಅವರು, ತನ್ನ ಕವರಿಂಗ್ ಪತ್ರದಲ್ಲಿ ಇದನ್ನು ಮುಖ್ಯಮಂತ್ರಿಯ ಗಮನಕ್ಕೆ ತರಲು, ಹೆಸರಿಸಲಾದವರನ್ನು ಗುರುತಿಸಲು ಶಿಫಾರಸು ಮಾಡಿದ್ದು, ಸರ್ಕಾರಕ್ಕೆ ಅಪಖ್ಯಾತಿ ಉಂಟುಮಾಡುವುದನ್ನು ತಪ್ಪಿಸಲು ವರದಿಯ ಗೌಪ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಕೇಳಿದ್ದರು, ಎಂದು ಫಡ್ನವಿಸ್ ಹೇಳಿದರು.

ಮುಖ್ಯಮಂತ್ರಿ ಜಿಎಡಿ ಉಸ್ತುವಾರಿ ವಹಿಸಿಕೊಂಡಿದ್ದರೂ ವರದಿಯ ಬಗ್ಗೆ ಕಾರ್ಯನಿರ್ವಹಿಸಲು ಏನೂ ಮಾಡಲಿಲ್ಲ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಉಸ್ತುವಾರಿಯಾದ್ದರಿಂದ, ನಾನು ವರದಿಯನ್ನು ಕೇಂದ್ರಕ್ಕೆ ಸಲ್ಲಿಸುತ್ತೇನೆ, ಎಂದು ಅವರು ಹೇಳಿದರು.

RELATED TOPICS:
English summary :Corruption in transfer, posting by Thackeray govt : Fadnavis reveals call data intercept report

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...