Sun,May19,2024
ಕನ್ನಡ / English

45 ವರ್ಷ ಮೇಲ್ಪಟ್ಟವರಿಗೂ ಎಪ್ರಿಲ್ 1 ರಿಂದ ಕೋವಿಡ್-19 ಲಸಿಕೆ ನೀಡಲು ಕೇಂದ್ರ ಸರ್ಕಾರ | Janata news

23 Mar 2021
1607

ನವದೆಹಲಿ : ಕೋವಿಡ್-19 ವೈರಸ್ ನಿಯಂತ್ರಣಕ್ಕೆ ಹಂತ ಹಂತವಾಗಿ ದೇಶದಲ್ಲಿ ಲಸಿಕೆ ಅಬಿಯಾನವನ್ನು ವಿಸ್ತರಿಸುತ್ತಿರುವ ಕೇಂದ್ರ ಸರ್ಕಾರ ಇಂದು ಮತ್ತೊಂದು ಮಹತ್ವದ ಹೆಜ್ಜೆ ಪ್ರಕಟಿಸಿದೆ. ಮುಂದಿನ ವಾರ ಅಂದರೆ, ಎಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಇದೀಗ ನಿರ್ಧರಿಸಿದೆ.

ಎಪ್ರಿಲ್ 1 ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಕುರಿತು ಕೇಂದ್ರ ಸಚಿವ ಸಂಪುಟದ ತೀರ್ಮಾನ ಮಾಡಿದೆ. ಅರ್ಹರು ತಕ್ಷವೇ ರಿಜಿಸ್ಟ್ರೇಶನ್ ಮಾಡಿಸಿ ಲಸಿಕೆ ಪಡೆಯಬೇಕು, ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಹೇಳಿದ್ದಾರೆ.

ಕೋವಿಡ್-19 ಲಸಿಕೆಯ ಎರಡನೇ ಡೋಸ್ ಅನ್ನು ಯಾವಾಗ ತೆಗೆದುಕೊಳ್ಳಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ, ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಂಗಳವಾರ ಹೇಳಿದ್ದಾರೆ. ವಿಜ್ಞಾನಿಗಳು ಮತ್ತು ವಿಶ್ವ ವಿಜ್ಞಾನಿ ಸಂಸ್ಥೆಗಳ ಸಲಹೆಯಂತೆ, ನಾಲ್ಕನೇ ಮತ್ತು ಎಂಟನೇ ವಾರದಲ್ಲಿ, ವಿಶೇಷವಾಗಿ ಕೋವಿಶೀಲ್ಡ್ ಗೆ ಎರಡನೇ ಡೋಸ್ ನ್ನು ನೀಡಬಹುದು, ಎಂದು ಅವರು ಉಲ್ಲೇಖಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ಕುರಿತು ಹೇಳಿರುವ ಅವರು, ಇದೇ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಕೋವಿಡ್ ಲಸಿಕೆ ನೀಡುವ ಕೇಂದ್ರ ಸಚಿವ ಸಂಪುಟದ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಇದರಿಂದ ಲಸಿಕೆ ವಿರುದ್ಧದ ನಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ದೊರಕಿದೆ. 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಳ್ಳಿ ಎಂದು ಕೋರುತ್ತೇನೆ, ಎಂದು ತಮ್ಮ ಸಾಮಾಜಿಕ ಮಾದ್ಯಮದಲ್ಲಿ ಪ್ರಕಟಿಸಿದ್ದಾರೆ.

ಭಾರತದಲ್ಲಿ ಲಸಿಕೆ ನೀಡುವಿಕೆ ಅಭಿಯಾನ ಮೊದಲ ಹಂತ ಜನವರಿ 16ರಿಂದ ಆರಂಭಗೊಂಡಿತ್ತು. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಕೊರೋನಾ ವಾರಿಯರ್ಸ್‌ಗೆ ಲಸಿಕೆ ನೀಡಲಾಗಿತ್ತು. ಎರಡನೇ ಹಂತದಲ್ಲಿ ಮಾರ್ಚ್ 1 ರಿಂದ ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ, ಅಂದರೆ 60 ವರ್ಷ ಮೇಲ್ಪಟ್ಟ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 45 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕಾ ಅಭಿಯಾನ ಆರಂಭಿಸಿತ್ತು.

RELATED TOPICS:
English summary :COVID-19 vaccine for above 45 age group : Center cabinat decided

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...