Sat,Apr27,2024
ಕನ್ನಡ / English

ಬೈಕ್ ಸವಾರನನ್ನ ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ? ಎಚ್.ವಿಶ್ವನಾಥ್‌ರಿಂದ ಪೊಲೀಸ್ ಕಮಿಷನರ್‌ ತರಾಟೆಗೆ | Janata news

25 Mar 2021
1518

ಮೈಸೂರು : ಬೈಕ್ ಸವಾರನನ್ನ ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ?. ನೀನು ಯಾವ್ ಸೀಮೆ ಕಮಿಷನರಯ್ಯ? ಎಂದು ಮೈಸೂರು ಕಮಿನಷರ್‌ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಗುಡುಗಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈಕ್‌ ಸವಾರರ ಸಾವಿಗೆ ಕಾರಣರಾದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡುತ್ತೀಯಾ. ಪೊಲೀಸ್ ಕಮಿಷನರ್ ಬೀದಿಗೆ ಬರಲ್ಲ. ಸಿಟಿ ರೌಂಡ್ ಹಾಕಲ್ಲ, ಎಷ್ಟು ವರ್ಷ ಆಯ್ತು ಬಂದು. ಎಷ್ಟು ಜನ ಡಿಸಿಪಿ,‌ ಎಸಿಪಿಗಳಿದ್ದೀರಿ ಏನ್ ಮಾಡ್ತಿದ್ದೀರಿ ಎಂದು ಪ್ರಶ್ನಿಸಿದರು.

ಎಷ್ಟು ಜನ ಡಿಸಿಪಿ,‌ ಎಸಿಪಿಗಳಿದ್ದೀರಿ. ಎಲ್ಲರೂ ಏನ್ ಮಾಡ್ತಿದ್ದೀರಿ. ಕೇವಲ ಟ್ರಾಫಿಕ್ ಪೊಲೀಸರಿಂದ ಟ್ರಾಫಿಕ್ ಕಂಟ್ರೋಲ್ ಆಗಲ್ಲ. ಜನಪ್ರತಿನಿಧಿಗಳು, ಜನರ‌ ಬಗ್ಗೆ ಗೌರವ ಇಲ್ಲ. ಸದನದಲ್ಲಿ ಚರ್ಚೆಯೂ ಆಗಿಲ್ಲ. ಅಧಿವೇಶನದಲ್ಲಿ ಸಿಡಿ ಹಿಡ್ಕೊಂಡು ವಿಷ್ಣು ಚಕ್ರ ತಿರುಗಿಸಿದ್ದಾರೆ ಅಷ್ಟೇ.. ಮೈಸೂರಿನಲ್ಲಿ ನಡೆದ ನಿನ್ನೆಯ ಘಟನೆ ಖಂಡನೀಯ ಎಂದರು.

ಇದು ಪೊಲೀಸರ ಅಚಾತುರ್ಯದಿಂದ ನಡೆದಿರುವ ಘಟನೆ. ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಅಂತ ಕಾನೂನು ಎಲ್ಲಿದೆ? ಫೋಟೋ, ಸಿಸಿ ಕ್ಯಾಮೆರಾ ಇಲ್ವ? ಇವರಿಗೆ ಮಾನ ಮರ್ಯಾದೆ ಇಲ್ಲ, ಗೂಂಡಾಗಿರಿ ಮಾಡ್ತಿದ್ದಾರೆ.

ಕಮಿಷನರ್ ಸುಮ್ಮನೆ ಕೂರುವುದಲ್ಲ, ಹೊರಗೆ ಬರಬೇಕು. ಸಿಟಿ ಪೊಲೀಸ್ ಕಾಯ್ದೆ ಏನ್ ಹೇಳುತ್ತೆ. ಓಡಿಸಿಕೊಂಡು ಬೈಕ್ ಇಡಿ ಅಂತ ಹೇಳುತ್ತಾ. ಸರ್ಕಾರದ ದುಡ್ಡಲ್ಲಿ ಕ್ಯಾಮೆರಾ, ಉಪಕರಣಗಳನ್ನು ಕೊಟ್ಟಿದ್ದೀವಿ. ಈ ವರ್ತನೆಯನ್ನು ಯಾರೂ ಕ್ಷಮಿಸಲ್ಲ ಎಂದು ಕಿಡಿಕಾರಿದರು.

ಈ ಸಂಬಂಧ ನಾನು ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಜೊತೆ ಮಾತನಾಡ್ತೀನಿ. ಪೊಲೀಸ್ ವ್ಯವಸ್ಥೆ ಸುಧಾರಣೆಯಾಗಬೇಕಿದೆ ಎಂದು ಹೇಳಿದರು.

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...