Sun,May19,2024
ಕನ್ನಡ / English

ಮಹಾರಾಷ್ಟ್ರ ಪೋಲಿಸ್ ಅಮಾನತುಗೊಂಡ ಸಚಿನ್ ವಾಜೆ ಎನ್‌ಐಎ ಕಸ್ಟಡಿಯನ್ನು ವಿಸ್ತರಿಸಿದ ನ್ಯಾಯಾಲಯ | Janata news

25 Mar 2021
2508

ಮುಂಬೈ : ವಿಶೇಷ ಎನ್‌ಐಎ ನ್ಯಾಯಾಲಯವು ಅಮಾನತುಗೊಂಡ ಮಹಾರಾಷ್ಟ್ರ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ವಾಜೆ ಅವರ ಬಂಧನವನ್ನು ಏಪ್ರಿಲ್ 3, 2021 ರವರೆಗೆ ವಿಸ್ತರಿಸಿದೆ.

ಮಾರ್ಚ್ 13 ರಂದು ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿತ್ತು. ಆತನ ಮೇಲೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪವಿದೆ.

ನನ್ನನ್ನು ಬಲಿಪಶುವನ್ನಾಗಿ ಮಾಡಲಾಗುತ್ತಿದೆ, ಎಂದು ವಿಚಾರಣೆಯ ಸಮಯದಲ್ಲಿ ವಾಜೆ ನ್ಯಾಯಾಲಯಕ್ಕೆ ಹೇಳಿದ್ದಾರೆ. ಸ್ಫೋಟಕಗಳನ್ನು ಪತ್ತೆಹಚ್ಚಲಾದ ಎಸ್‌ಯುವಿ ಮಾಲೀಕತ್ವ ಹೊತ್ತಿದ್ದ ಮನ್ಸುಖ್ ಹಿರಾನ್ ಅವರೊಂದಿಗಿನ ಸಂಪರ್ಕಕ್ಕಾಗಿ ಸಚಿನ್ ವಾಜೆ ಅವರನ್ನು ಬಂಧಿಸಲಾಗಿತ್ತು.

ಇಂದು ವಿಶೇಷ ಕೋರ್ಟ್ ಗೆ ಎನ್ಐಎ ಪರ ಹಾಜರಾದ ಎಎಸ್‌ಜಿ ಅನಿಲ್ ಸಿಂಗ್ ಅವರು, ಇನ್ನೂ ಹೆಚ್ಚುವರಿ 15 ದಿನಗಳ ಕಾಲದ ವರೆಗೆ ವಾಜೆ ಅವರನ್ನು ವಶಕ್ಕೆ ಕೋರಿದರು.

ಮುಖೇಶ್ ಅಂಬಾನಿ ಮನೆ ಮುಂದೆ ಇಡಲಾಗಿದ್ದ ಸ್ಫೋಟಕ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ, ಅವರ ಮನೆಯಲ್ಲಿ ಸಾಕಷ್ಟು ಪ್ರಮಾಣದ ಮದ್ದುಗುಂಡುಗಳ ಬಗ್ಗೆ ವಿವರಿಸಲಾಗಲಿಲ್ಲ ಮತ್ತು ಇದನ್ನು ಮತ್ತಷ್ಟು ಪ್ರಶ್ನಿಸಬೇಕು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ತಿಳಿಸಿದೆ.

ಶೋಧ ಕಾರ್ಯಾಚರಣೆ ವೇಳೆಗೆ ವಾಜೆ ಅವರ ನಿವಾಸದಿಂದ ಲೆಕ್ಕವಿಲ್ಲದ 62 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ, ಎಂದು ಅವರು ಹೇಳಿದರು. ಪ್ರತ್ಯೇಕವಾಗಿ, ಅವರಿಗೆ ಅಧಿಕೃತವಾಗಿ ನೀಡಲಾದ 30 ಗುಂಡುಗಳಲ್ಲಿ 25 ಕಾಣೆಯಾಗಿದೆ.

ವಾಜೆ ಅವರ ಕಾರಿನಿಂದ ಸಂಗ್ರಹಿಸಿದ ಮಾದರಿಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ, ಎಂದು ಸಿಂಗ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಒಬ್ಬ ಪೊಲೀಸ್ ಅಧಿಕಾರಿಯಾಗಿ ಸ್ಫೋಟಕಗಳನ್ನು ಇಡುವುದರಲ್ಲಿ ಭಾಗಿಯಾಗಿರುವುದು ಕಂಡುಬರುವುದರಿಂದ, ಇದು ಇಡೀ ದೇಶದ ಅತ್ಯಂತ ಭೀಕರ ಅಪರಾಧಗಳಲ್ಲಿ ಒಂದಾಗಿದೆ, ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ, ಎನ್ನಲಾಗಿದೆ.

RELATED TOPICS:
English summary :Maharashtra police suspended Sachin Waze NIA custody extended by court

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...