Sun,May19,2024
ಕನ್ನಡ / English

ಸಾಲ ತೀರಿಸಲು ಯುವಕನನ್ನು ಅಪಹರಣ: 2 ಕೋಟಿಗೆ ಬೇಡಿಕೆ ಇಟ್ಟಿದ್ದ 4 ಆರೋಪಿಗಳು ಅರೆಸ್ಟ್ | Janata news

26 Mar 2021
1855

ಬೆಂಗಳೂರು : ತಂಗಿಯ ಮದುವೆಗಾಗಿ ಮಾಡಿದ್ದ ಸಾಲವನ್ನ ತೀರಿಸಲು ಯುವಕನೊಬ್ಬನನ್ನ ಕಿಡ್ನಾಪ್​ ಮಾಡಿ 2 ಕೋಟಿ ರೂಪಾಯಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ 6 ಮಂದಿ ಆರೋಪಿಗಳನ್ನು ಕೆಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್ ಫಹಾದ್, ಜಬೀಉಲ್ಲ, ಸಯ್ಯದ್ ಸಲ್ಮಾನ್, ತೌಹೀದ್ ಬಂಧಿತ ಆರೋಪಿಗಳು. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಏಳು ಗಂಟೆಗಳ ಮಿಂಚಿನ ಕಾರ್ಯಾಚರಣೆ ನಡೆಸಿ, ಬೆಂಗಳೂರು ನಗರ ಪೊಲೀಸರು ಸುಖಾಂತ್ಯ ಕಾಣಿಸಿದ್ದಾರೆ. ಅಪಹೃತ ಯುವಕನನ್ನು ಜೀವಂತ ಹಿಂತಿರುಗಿಸಲು 2 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ 7 ಜನ ದುಷ್ಕರ್ಮಿಗಳನ್ನು ನಗರ ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 25 ರ ಮಧ್ಯಾಹ್ನ ನಗರದ ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ನರ್ಸಿಂಗ್ ಕಾಲೇಜು ನಡೆಸುವವರ ಮಗ ರಜೀಬ್ ಅರಾಪತ್ ಎಂಬುವನನ್ನು ದುಷ್ಕರ್ಮಿಗಳ ಗ್ಯಾಂಗ್ ಒಂದು ಕಿಡ್ನಾಪ್ ಮಾಡಿತು. ನಾಲ್ಕು ಜನರು ಹುಡುಗಿಯನ್ನು ಚುಡಾಯಿಸುತ್ತಿರುವುದಾಗಿ ಆಪಾದನೆ ಮಾಡುತ್ತಾ ಯುವಕನನ್ನು ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದರು.

ಯುವಕನ ತಂದೆಯ ಪರಿಚಯಸ್ತರು ಕರೆ ಮಾಡಿ ನಿಮ್ಮ ಮಗನನ್ನು ಕಾರ್‍ನಲ್ಲಿ ಯಾರೋ ಅಪಹರಿಸಿಕೊಂಡು ಹೋದರೆಂದು ತಿಳಿಸಿದ್ದಾರೆ. ತಕ್ಷಣ ತಂದೆ ಮಗನ ಮೊಬೈಲ್‍ಗೆ ಕರೆ ಮಾಡಿದಾಗ ಅದು ಸ್ವಿಚ್‍ಆಫ್ ಆಗಿದೆ. ಕೂಡಲೇ ಅವರು ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಪಹರಣಕಾರರು ಯುವಕನ ತಂದೆಗೆ ಕರೆ ಮಾಡಿ 2 ಕೋಟಿ ಹಣ ಕೊಟ್ಟರೆ ನಿಮ್ಮ ಮಗನನ್ನು ಬಿಡುತ್ತೇವೆ, ಇಲ್ಲದಿದ್ದರೆ ಕೈ, ಕಾಲು ಕತ್ತರಿಸಿ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಯುವಕನ ತಂದೆ ನೀಡಿದ ದೂರಿನ ಮೇರೆಗೆ ಅಪಹರಣಕಾರರನ್ನು ಸೆರೆ ಹಿಡಿಯಲು ಪೂರ್ವ ವಿಭಾಗದ ಡಿಸಿಪಿ ಡಾ||ಶರಣಪ್ಪ ಅವರು ಬಾಣಸವಾಡಿ ಎಸಿಪಿ ಎನ್.ಬಿ.ಸಕ್ರಿ ಅವರ ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಿದ್ದರು. ಈ ತಂಡಗಳು ತಾಂತ್ರಿಕವಾಗಿ ಹಾಗೂ ವೈಜ್ಞಾನಿಕವಾಗಿ ತನಿಖೆ ಕೈಗೊಂಡು ಕೃತ್ಯ ನಡೆದ ಸ್ಥಳದಲ್ಲಿ ಲಭ್ಯವಾದ ಮಾಹಿತಿ ಹಾಗೂ ಸಿಸಿಟಿವಿಯಲ್ಲಿ ಲಭ್ಯವಾದ ದೃಶ್ಯಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಯುವಕನನ್ನು ರಕ್ಷಿಸಿ ದ್ದಾರೆ.

ಆರೋಪಿಗಳು ತುಂಬಾ ಸಾಲ ಮಾಡಿಕೊಂಡಿದ್ದು, ಅವರಲ್ಲಿ ಒಬ್ಬ ತನ್ನ ತಂಗಿಯ ಮದುವೆಗೆ ಮಾಡಿದ್ದ ಸಾಲವನ್ನು ತೀರಿಸುವುದಕ್ಕೋಸ್ಕರ ಅಪರಾಧದಲ್ಲಿ ಶಾಮೀಲಾಗಿದ್ದಾನೆ. ಅದರಂತೆ ರಬೀಜ್ ಅರಾಪತ್ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರನ್ನು ಕಿಡ್ನಾಪ್ ಮಾಡಲು ಪ್ಲಾನ್ ಮಾಡಿದರು ಇದಕ್ಕಾಗಿ ಓಎಲ್‍ಕ್ಸ್‍ನಲ್ಲಿ ಮಾರುತಿ 800 ಕಾರನ್ನು ಖರೀದಿ ಮಾಡಿದ್ದಾರೆ. ನಂತರ ಯುವಕನನ್ನು ಅಪಹರಿಸಿ ಕಾರಿನಲ್ಲಿ ಕೂರಿಸಿಕೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅವಲಹಳ್ಳಿ, ಯರ್ರಪ್ಪನಹಳ್ಳಿ ಸುತ್ತಮುತ್ತ ಸುತ್ತಿಸಿದ್ದಾರೆ. ಪೋಷಕರಿಗೆ ಕರೆ ಮಾಡಿ 2 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...