Sun,Apr28,2024
ಕನ್ನಡ / English

ವೀರನಾಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ - ಎಚ್ಚರಿಸಿದ ಎಚ್‌ಡಿಕೆ | Janata news

26 Mar 2021
1827

ಬೆಂಗಳೂರು : ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್‌. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್‌ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ, ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಮತಗಳನ್ನು ವಿಭಜಿಸುವ ಹುನ್ನಾರ ನಡೆಸಿದೆ, ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಮಹಾನ್‌ನಾಯಕ ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್‌ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್‌ಗೆ ಇಂಥ ದುರ್ಬುದ್ಧಿ ಇಲ್ಲ, ಎಂದು ಲೇವಡಿ ಮಾಡಿದ್ದಾರೆ.

ನಮ್ಮ ರಾಜ್ಯ, ನಮ್ಮ ನೆಲ, ನಮ್ಮ ಪಕ್ಷ, ನಮ್ಮ ಅಭ್ಯರ್ಥಿ. ಇದರಲ್ಲಿ ಜೆಡಿಎಸ್‌ ಯಾರ ಅಪ್ಪಣೆಗೆ ಕಾಯಬೇಕು? ಯಾವ ದೊಣ್ಣೆ ನಾಯಕನ ಆಜ್ಞೆ ಆಗಬೇಕು ನಮಗೆ? ಜನರಿಗೆ ಬೇಕಾದ ಅಭ್ಯರ್ಥಿಗಳನ್ನು ನಾವು ಹಾಕುತ್ತೇವೆ. ಅದರಲ್ಲಿ ನಮಗೆ ಧರ್ಮ ನಗಣ್ಯ. ಪ್ರತಿಯೊಂದರಲ್ಲೂ ಹಿಂದೂ-ಮುಸ್ಲಿಂ ಎಂದು ಹುಡುಕುವವರಿಗೆ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು, ಎಂದು ತಿರುಗೇಟು ನೀಡಿದ್ದಾರೆ.

ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್‌ನ ಐತಿಹಾಸಿಕ ದುರಭ್ಯಾಸ. ಅದಕ್ಕಾಗಿಯೇ ಮುಸ್ಲಿಮರನ್ನು ಕಾಂಗ್ರೆಸ್‌ ನಮ್ಮ ಮತ ಎನ್ನುತ್ತದೆ. ನಮ್ಮವರು ಅನ್ನುವುದಿಲ್ಲ. ಕಾಂಗ್ರೆಸ್‌ನ ಇಂಥ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ದೇಶದಲ್ಲಿ ಕೋಮು ಭಾವನೆಗಳು ಈ ಮಟ್ಟಕ್ಕೆ ಕೆರಳಿರುವುದರ ಹಿಂದೆ ಕಾಂಗ್ರೆಸ್‌ನ ಪ್ರಮಾದಗಳಿವೆ.

ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ, ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

RELATED TOPICS:
English summary :The great leader who made brave Tipu a traitor should keep quite - Warned HDK

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...