Sun,May19,2024
ಕನ್ನಡ / English

ಪಶ್ಚಿಮ ಬಂಗಾಳ : ಮತಗಟ್ಟೆಯಲ್ಲಿ ಹಿಂಸಾಚಾರ ಗುಂಡಿನ ದಾಳಿಗೆ 5 ಸಾವು | ಜನತಾ ನ್ಯೂಸ್

10 Apr 2021
1861

ಕೊಲ್ಕೊತ್ತಾ : ಪಶ್ಚಿಮ ಬಂಗಾಳದ 44 ವಿಧಾನಸಭಾ ಸ್ಥಾನಗಳಿಗೆ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ ವೇಳೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸೇರಿದಂತೆ, ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ.

ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಸೀತಾಲ್ಕುಚಿಯ ಮತಗಟ್ಟೆ ಸಂಖ್ಯೆ 126ರಲ್ಲಿ ಮತದಾನದ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ.

ಚುನಾವಣೆ ಮತದಾನ ನಡೆಯುತ್ತಿರುವ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಈವರೆಗೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಭಾರತದ ಚುನಾವಣಾ ಆಯೋಗ(ಇಸಿಐ) ವರದಿ ಕೋರಿದೆ.

ಕೇಂದ್ರ ಪಡೆಗಳ ಮೇಲೆ ಹಲ್ಲೆ ನಡೆಸಲಾಗಿದ್ದು, ಪ್ರತೀಕಾರವಾಗಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ ಮತದಾನ ಪ್ರಾರಂಭವಾದ ಒಂದು ಗಂಟೆಯೊಳಗೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ನಡುವೆ ಬೂತ್ ಸಂಖ್ಯೆ 285 ರಲ್ಲಿ ಉಣ್ಬವಿಸಿದ ಘರ್ಷಣೆಯ ಬೆನ್ನಲ್ಲೇ ಗೋಲಿಬಾರ್ ನಡೆದಿದೆ. ಜಿಲ್ಲೆಯ ಇತರ ಭಾಗಗಳಿಂದಲೂ ಕೆಲವು ಭಾಗಗಳಲ್ಲಿ ಹಿಂಸಾಚಾರದ ಘಟನೆಗಳು ನಡೆಯಲಾರಂಭಿಸಿವೆ.

ಕೂಚ್ ಬೆಹಾರ್‌ನ ಮತದಾನ ಕೇಂದ್ರದ ಹೊರಗೆ ಹಾರಿಸಲ್ಪಟ್ಟ ಗುಂಡಿನಿಂದ ಮೃತಪಟ್ಟವರಲ್ಲಿ, ಮೊದಲ ಬಾರಿಯ ಮತದಾರನೂ ಇದ್ದನು. ಮೃತರನ್ನು ಆನಂದ ಬರ್ಮನ್ ಎಂದು ಗುರುತಿಸಲಾಗಿದೆ. ಮೃತ ಯುವಕನಿಗೆ 18 ವರ್ಷ ವಯಸ್ಸಾಗಿತ್ತು ಮತ್ತು ಮೊದಲ ಬಾರಿಗೆ ಮತ ಚಲಾಯಿಸಲು ಬಂದಿದ್ದಾನೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಬರ್ಮನ್ ತಮ್ಮ ಪಕ್ಷದ ಬೆಂಬಲಿಗ ಎಂದು ಹೇಳಿಕೊಂಡರೆ, ತೃಣಮೂಲ ಕಾಂಗ್ರೆಸ್(ಟಿಎಂಸಿ) ಆತನ ಮೇಲೆ ಬಿಜೆಪಿ ಗುಂಡು ಹಾರಿಸಿದೆ ಎಂದು ಹೇಳಿಕೊಂಡಿದೆ.

ಇಂದು ಮತದಾನ ಕಾಣುತ್ತಿರುವ ಪಶ್ಚಿಮ ಬಂಗಾಳದ ಐದು ಜಿಲ್ಲೆಗಳ 44 ಕ್ಷೇತ್ರಗಳಲ್ಲಿ ಬೆಳಿಗ್ಗೆ 9.45 ರವರೆಗೆ 15.85% ರಷ್ಟು ಮತದಾನ ದಾಖಲಾಗಿದೆ, ಎಂದು ಭಾರತದ ಚುನಾವಣಾ ಆಯೋಗ(ಇಸಿಐ) ತಿಳಿಸಿದೆ.

RELATED TOPICS:
English summary :West Bengal : Firing in polling booth, violence, 5 dead

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...