ನಾಳೆ ನಡೆಯಬೇಕಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ! | ಜನತಾ ನ್ಯೂಸ್

ಬೆಂಗಳೂರು : ನಾಲ್ಕು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಬಸ್ ಮುಷ್ಕರದ ಕಾರಣದಿಂದ ನಾಳೆ ನಡೆಯಲಿದ್ದ KSET ಪರೀಕ್ಷೆಯನ್ನು ಮೈಸೂರು ವಿಶ್ವವಿದ್ಯಾಲಯ ಮುಂದೂಡಿದೆ.
ನಾಲ್ಕು ದಿನಗಳಿಂದ ನಡೆಯುತ್ತಿರುವ ಸಾರಿಗೆ ಸಿಬ್ಬಂದಿಗಳ ಮುಷ್ಕರ ಹಿನ್ನೆಲೆಯಲ್ಲಿ KSET ಪರೀಕ್ಷೆಯನ್ನು ಮುಂದೂಡುವಂತೆ ಹಲವು ಪರೀಕ್ಷಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿದ್ದರು. ಪರೀಕ್ಷಾರ್ಥಿಗಳ ಮನವಿ ಆಲಿಸಿದ ಮೈಸೂರು ವಿಶ್ವವಿದ್ಯಾಲಯದ KSET ಪರೀಕ್ಷೆಯನ್ನು ಮುಂದೂಡಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾ ಸಂಯೋಜಕ ಹೆಚ್.ರಾಜಶೇಖರ್, KSET ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಯುವ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದೆ.

RELATED TOPICS:
English summary :KSET 2021 exam postponed, new dates soon