Fri,May03,2024
ಕನ್ನಡ / English

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಲೀನ್ ಬೌಲ್ಡ್ ಆಗಿದ್ದಾರೆ, ಬಿಜೆಪಿ ಶತಕ ಬಾರಿಸಿದೆ - ಪ್ರಧಾನಿ ಮೋದಿ | ಜನತಾ ನ್ಯೂಸ್

12 Apr 2021
1903

ಕೊಲ್ಕೊತ್ತಾ : ಬಂಗಾಳದ ಚುನಾವಣಾ ರ್ಯಾಲಿಯಲ್ಲಿ ಕ್ರಿಕೆಟ್ ಪದಗಳನ್ನು ಬಳಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಬಂಗಾಳದ ಜನರು ಎಷ್ಟೊಂದು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಹೊಡೆದಿದ್ದಾರೆ ಎಂದರೆ ಬಿಜೆಪಿ ಈಗಾಗಲೇ ಶತಕ ಬಾರಿಸಿದೆ ಎಂದರು, ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲ್ಯಾಣಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು.

ವಿಧಾನಸಭಾ ಚುನಾವಣೆಯ ಮೊದಲ 4 ಹಂತಗಳಲ್ಲಿ ಬಿಜೆಪಿ ಈಗಾಗಲೇ ಒಂದು ಶತಕ ಪೂರೈಸಿದೆ. ಅರ್ಧದಷ್ಟು ಪಂದ್ಯಗಳಲ್ಲಿ(ಆಧಾ ಮೇ ಪೂರಾ ಸಾಫ್) ಟಿಎಂಸಿಯನ್ನು ಅಳಿಸಿ ಹಾಕಿದ್ದಾರೆ, ಎಂದರು.

ತಮ್ಮ ಪಕ್ಷದ ಪ್ರತಿಸ್ಪರ್ಧಿ ಟಿಎಂಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ ಪ್ರಧಾನಿ ಮೋದಿ, ಚುನಾವಣಾ ಸೋಲಿನ ಭಯದಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಸಭ್ಯತೆಯ ಗೆರೆ ದಾಟಿದ್ದಾರೆ, ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬರ್ಧಾಮನ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಂಗಾಳದಲ್ಲಿ ಟಿಎಂಸಿಗೆ ತೀವ್ರ ಹಿನ್ನಡೆಯಾಗುತ್ತಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಲೀನ್ ಬೌಲ್ಡ್ ಆಗಿದ್ದಾರೆ. ಇದೇ ಆಕ್ರೋಶದಲ್ಲಿ ರಾಜ್ಯದಲ್ಲಿ ಚುನಾವಣಾ ಕರ್ತವ್ಯದಲ್ಲಿರುವ ಕೇಂದ್ರ ಪಡೆಗಳ ವಿರುದ್ಧ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದರು. ಏಪ್ರಿಲ್ 10 ರಂದು ಕೂಚ್ ಬೆಹಾರ್‌ನಲ್ಲಿ ಸಿಐಎಸ್ಎಫ್ ಸಿಬ್ಬಂದಿಗಳ ಮೇಲೆ ನಡೆದ ಗುಂಪಿನ ದಾಳಿಗೆ ಪ್ರತಿಯಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದರು.

ಬಂಗಾಳದ ಜನರು ನಂದಿಗ್ರಾಮ್ನಲ್ಲಿ ದೀದಿಯನ್ನು ಕ್ಲೀನ್ ಬೌಲ್ ಮಾಡಿದ್ದಾರೆ, ಎಂದಿರುವ ಪ್ರಧಾನಿ ಮೋದಿ, ದೀದಿ-ಓ-ದೀದಿ(ಮಮತಾ ಬ್ಯಾನರ್ಜಿ) ನಂದಿಗ್ರಾಮ್‌ದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕ್ಲೀನ್ ಬೋಲ್ಡ್ ಆಗಲಿರುವುದು ಯಾರು, ಎಂದು ಪ್ರಶ್ನಿಸಿದ್ದಾರೆ ಅಲ್ಲದೇ, ಮೇ.02ರ ಚುನಾವಣಾ ಫಲಿತಾಂಶದ ಬಳಿಕ ಮಮತಾ ಬ್ಯಾನರ್ಜಿ ಮತ್ತು ಅವರ ತಂಡ ರಾಜ್ಯದಿಂದ ಗಂಟು ಮೂಟೆ ಕಟ್ಟಲಿದೆ, ಎಂದು ಲೇವಡಿ ಮಾಡಿದ್ದಾರೆ.

ಚುನಾವಣೆಯಲ್ಲಿ ಸೋಲು ಖಚಿತ ಎಂದರಿತಿರುವ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ನಾಯಕರು, ಹಿಂದುಳಿದ ವರ್ಗಗಳನ್ನು ದೂಷಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ಜನರಿಗೆ ಅವಮಾನಿಸುತ್ತಿರುವ ಮಮತಾ ಮತ್ತು ಟಿಎಂಸಿ ಪಕ್ಷಕ್ಕೆ ಬಂಗಾಳದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮೋದಿ ಕಿಡಿಕಾರಿದರು.

ಇದೇ ವೇಳೆ, ಪರಿಶಿಷ್ಟ ಜಾತಿಯವರು ಭಿಕ್ಷುಕರು ಎಂದು ದೀದಿಗೆ ತುಂಬಾ ಹತ್ತಿರವಿರುವ ನಾಯಕರೊಬ್ಬರು ಕರೆದಿದ್ದರೂ ಅದಕ್ಕೆ ವಿಷಾದ ವ್ಯಕ್ತಪಡಿಸಲು ಯೋಚಿಸುತ್ತಿಲ್ಲ, ಎಂದು ಅಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :CM Mamata Banerjee got clean bold, BJP got century - PM Modi

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...