Sun,May19,2024
ಕನ್ನಡ / English

ಅಂಕೋಲಾ-ಹುಬ್ಬಳ್ಳಿ ರಾಷ್ಟೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ : 2 ಸಾವು, 4 ಗಾಯ | ಜನತಾ ನ್ಯೂಸ್

13 Apr 2021
2105

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮತ್ತು ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.

ಮೃತ ದುರ್ದೈವಿಗಳನ್ನು ಅವರ್ಸಾದ ಗುರುಪ್ರಸಾದ ಅಣ್ವೇಕರ್(32) ಹಾಗೂ ಸಂಜನಾ ಸಂತೋಷ ರಾಯ್ಕರ್(7) ಎಂದು ಗುರುತಿಸಲಾಗಿದೆ. ಅಂಕೋಲಾದಿಂದ ಯಲ್ಲಾಪುರದ ಕಡೆಗೆ ಅತಿವೇಗದಿಂದ ಹೊರಟಿದ್ದ ಲಾರಿ ಕಾರಿಗೆ ಮುಖಾಮುಖಿ ಡಿಕ್ಕಿಹೊಡೆದ ಕಾರಣ ಕಾರು ಸಂಪೂರ್ಣ ದ್ವಂಸಗೊಂಡಿದೆ ಎನ್ನಲಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಸದಸ್ಯರಾದ, ಸಂತೋಷ ರಾಯ್ಕರ್, ಪತ್ನಿ ಅಶ್ವಿನಿ ರಾಯ್ಕರ್, ಮಗ ಸೋಹಂ ರಾಯ್ಕರ್ ಹಾಗೂ ಪ್ರೀತಂ ರೇವಣಕರ್ ಇವರಿಗೆ ಅಪಘಾತದಲ್ಲಿ ತೀವ್ರವಾದ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುಪ್ರಸಾದ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿರುವ ತಮ್ಮ ಅಕ್ಕನ ಕುಟುಂಬವನ್ನು ಯುಗಾದಿ ಹಬ್ಬದ ನಿಮಿತ್ತ ಅವರ್ಸಾಕ್ಕೆ ಕಾರಿನಲ್ಲಿ ಕರೆದುಕೊಂಡು ಬರುತ್ತಿದ್ದರು. ಅವರ ಸ್ನೇಹಿತ ಪ್ರೀತಮ್ ರೇವಣಕರ ಜೊತೆಗಿದ್ದರು.

ಯುಗಾದಿ ಹಬ್ಬದ ಆಚರಣೆಗೆಂದು ಊರಿಗೆ ಬರುತ್ತಿದ್ದ ಕುಟುಂಬ, ಅಪಘಾತದಿಂದ ಶೋಕದಲ್ಲಿ ಮುಳುಗಿದೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

RELATED TOPICS:
English summary :Accident in Ankola-Hubballi NH : 2 dead, 4 injured

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...