Tue,May07,2024
ಕನ್ನಡ / English

ನಿಷೇಧಿತ ಪಕ್ಷ ಟಿಎಲ್‌ಪಿ ಎದುರು ಮಂಡಿಯುರಿದ ಪಾಕಿಸ್ತಾನ ಸರ್ಕಾರ : ಫ್ರೆಂಚ್ ರಾಯಭಾರಿ ಉಚ್ಚಾಟಿಸಲು ನಿರ್ಧಾರ | ಜನತಾ ನ್ಯೂಸ್

20 Apr 2021
1489

ಇಸ್ಲಾಮಾಬಾದ್ : ಉದ್ರಿಕ್ತ ನಿಷೇಧಿತ ಸಂಘಟನೆ ಟಿಎಲ್‌ಪಿ ಎದುರು ಪಾಕಿಸ್ತಾನದ ಇಮ್ರಾನ್ ಖಾನ್ ಸರ್ಕಾರ ಮಂಡಿಯುರಿದೆ. ಪಾಕಿಸ್ತಾನದಲ್ಲಿರುವ ಫ್ರೆಂಚ್ ರಾಯಭಾರಿಯನ್ನು ಉಚ್ಚಾಟಿಸಲು ಇಂದು ಸಂಸತ್ತಿನಲ್ಲಿ ಸರ್ಕಾರವು ನಿರ್ಣಯವನ್ನು ಪರಿಚಯಿಸಲಿದೆ ಮತ್ತು ಹಿಂಸಾಚಾರದಲ್ಲಿ ಕೆಲವು ಪೊಲೀಸರನ್ನು ಕೊಂದು ಇತರರನ್ನು ಗಾಯಗೊಳಿಸಿದ ಟಿಎಲ್‌ಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲಾಗುವುದು, ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಹೇಳಿದ್ದಾರೆ.

ಅವ್ಯವಸ್ಥೆ ಮತ್ತು ಹಿಂಸಾಚಾರದಲ್ಲಿ ಮುಳುಗಿರುವ ಪಾಕಿಸ್ತಾನದಲ್ಲಿ, ನಿಷೇಧಿತ ತೆಹ್ರೀಕ್-ಎ-ಲ್ಯಾಬ್‌ಬೈಕ್ ಪಾಕಿಸ್ತಾನ(ಟಿಎಲ್‌ಪಿ) ಕಾರ್ಯಕರ್ತರು ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪಾಕ್ ಸರ್ಕಾರ ಮತ್ತು ಟಿಎಲ್‌ಪಿ ನಡುವೆ ನಿರಂತರ ಮಾತುಕತೆ ನಡೆದಿದ್ದರೂ ಪಾಕ್ ನಲ್ಲಿನ ಅವ್ಯವಸ್ಥೆ ಇನ್ನೂ ಮುಂದುವರೆದಿದೆ.

ತಮ್ಮ ಬಿಗಿಪಟ್ಟು ಸಡಿಲಿಸದ ನಿಷೇಧಿತ ಪಕ್ಷ ಟಿಎಲ್‌ಪಿ, ಆಂತರಿಕ ಸಚಿವ ಶೇಖ್ ರಶೀದ್ ಅಹ್ಮದ್ ಅವರ ರಾಜೀನಾಮೆ, ಪಾಕಿಸ್ತಾನದ ಫ್ರೆಂಚ್ ರಾಯಭಾರಿ ಉಚ್ಚಾಟನೆ, ಟಿಎಲ್‌ಪಿ ನಾಯಕ ಸೈಯದ್ ಸಾದ್ ಹುಸೇನ್ ರಿಜ್ವಿ ಮತ್ತು ಇತರ ಕಾರ್ಮಿಕರ ಬಿಡುಗಡೆ ಸೇರಿದಂತೆ ಐದು ಪ್ರಮುಖ ಬೇಡಿಕೆಗಳನ್ನು ಮಂಡಿಸಿದೆ.

ಸದ್ಯಕ್ಕೆ, ಪಾಕಿಸ್ತಾನದ ಫ್ರೆಂಚ್ ರಾಯಭಾರಿ ಉಚ್ಚಾಟನೆ, ಟಿಎಲ್‌ಪಿ ನಾಯಕ ಸೈಯದ್ ಸಾದ್ ಹುಸೇನ್ ರಿಜ್ವಿ ಮತ್ತು ಇತರ ಕಾರ್ಮಿಕರ ಬಿಡುಗಡೆ ಹಾಗೂ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲು ಇಮ್ರಾನ್ ಖಾನ್ ಸರ್ಕಾರ ಮುಂದಾಗಿದೆ.

ಫ್ರೆಂಚ್ ರಾಯಭಾರಿಯನ್ನು ಉಚ್ಚಾಟಿಸುವ ಕುರಿತು ಸರ್ಕಾರವು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇನ್ನೆರಡು ದಿನಗಳಲ್ಲಿ ನಿರ್ಣಯ ಮಂಡಿಸಲಿದೆ ಎಂದು ರಶೀದ್ ಇಂದು ಘೋಷಿಸಿದ್ದಾರೆ. ಟಿಎಲ್‌ಪಿ ಜೊತೆಗಿನ ಮಾತುಕತೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

RELATED TOPICS:
English summary :Pakistan Govt surrenders before banned TLP : Decides to expel French ambassador

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...