Sat,May18,2024
ಕನ್ನಡ / English

ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಧನ್ಯವಾದ ಅರ್ಪಿಸಿದ ಡಿಸಿಎಂ ಲಕ್ಷ್ಮಣ ಸವದಿ | ಜನತಾ ನ್ಯೂಸ್

21 Apr 2021
1171

ಬೆಂಗಳೂರು : ಸರ್ಕಾರದ ಮನವಿಗೆ ಓಗೊಟ್ಟು ಇಂದು ಸಂಜೆಯ ವೇಳೆಗೆ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಸುಮಾರು 13 ಸಾವಿರದಷ್ಟು ಬಸ್ಸುಗಳು ಸಂಚರಿಸಿರುವುದರಿಂದ ಸಾರ್ವಜನಿಕರು ಸಮಾಧಾನ ಪಡುವಂತಾಯಿತು. ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಈ ಬಗ್ಗೆ ನಾನು ಧನ್ಯವಾದಗಳನ್ನು ತಿಳಿಸಬಯಸುತ್ತೇನೆ, ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಯವರು ಹೇಳಿದ್ದಾರೆ.

ಇಂದು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸಾರಿಗೆ ನೌಕರರು ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗಿದ್ದರಿಂದ ಸುಮಾರು 13 ಸಾವಿರಕ್ಕೂ ಹೆಚ್ಚು ಬಸ್ಸುಗಳು ಸಂಚರಿಸುವಂತಾಗಿ ಕೋವಿಡ್‍ನಂತಹ ಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲೂ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಸಾರಿಗೆ ಸೇವೆ ಲಭ್ಯವಾಗಿ ನಿಟ್ಟುಸಿರು ಬಿಡುವಂತಾಯಿತು. ಹೀಗೆ ಕರ್ತವ್ಯ ಪ್ರಜ್ಞೆ ಮೆರೆದವರಿಗೆ ನನ್ನ ಹಾರ್ದಿಕ ಅಭಿನಂದನೆಗಳು. ಅದೇರೀತಿ ಮುಷ್ಕರದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಮುಂದಾಗಬೇಕೆಂದು ಖಾಸಗಿ ವಾಹನ ಮಾಲೀಕರಲ್ಲಿ ಕೋರಿಕೊಂಡಾಗ ಅವರೂ ಸಹ ತುಂಬು ಹೃದಯದಿಂದ ಸಹಕಾರ ನೀಡಿದ್ದನ್ನು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸುತ್ತೇನೆ, ಎಂದಿದ್ದಾರೆ.

ನಾಳೆಯಿಂದ ನಮ್ಮ ನೌಕರ ಬಾಂಧವರ ಸಹಕಾರದಿಂದ ಸಾರಿಗೆ ಸೇವೆಯು ಬಹುತೇಕ ಪೂರ್ಣಪ್ರಮಾಣದಲ್ಲಿ ಸುಗಮಗೊಳ್ಳುತ್ತದೆ ಎಂಬ ವಿಶ್ವಾಸ ಮೂಡುವಂತಾಗಿರುವುದು ಸಂತೋಷದ ಸಂಗತಿಯಾಗಿದೆ. ಮುಷ್ಕರದ ಸಂದರ್ಭದಲ್ಲಿಯೂ ಹಲವು ಮಂದಿ ಸಾರಿಗೆ ನೌಕರರು ಸರ್ಕಾರದ ಮನವಿಗೆ ಸ್ಪಂದಿಸಿ ಕರ್ತವ್ಯಪ್ರಜ್ಞೆ ಮೆರೆದು ಸಾರ್ವಜನಿಕರಿಗೆ ಈ ಸಂಕಷ್ಟದ ಕಾಲದಲ್ಲಿಯೂ ಸೇವೆ ಒದಗಿಸಲು ಶಕ್ತಿಮೀರಿ ಪ್ರಯತ್ನಿಸಿದ್ದಾರೆ. ಇಂತಹವರ ಕರ್ತವ್ಯ ನಿಷ್ಠೆ ಮತ್ತು ಪರಿಶ್ರಮವನ್ನು ನಾವು ಎಂದಿಗೂ ಮರೆಯುವುದಿಲ್ಲ ಮತ್ತು ಅವರ ಹಿತಾಸಕ್ತಿಗಳನ್ನು ರಕ್ಷಿಸುವತ್ತ ನಮ್ಮ ಸರ್ಕಾರ ಯಾವತ್ತೂ ಸಹಾನುಭೂತಿ ಹೊಂದಿರುತ್ತದೆ ಎಂಬುದನ್ನು ಮತ್ತೊಮ್ಮೆ ಈ ಸಂದರ್ಭದಲ್ಲಿ ಸ್ಪಷ್ಟಪಡಿಸುತ್ತೇನೆ, ಎಂದು ಆಶ್ವಾಸನೆ ನೀಡಿದ್ದಾರೆ.

ಇಡೀ ದೇಶದಲ್ಲೇ ನಮ್ಮ ಸಾರಿಗೆ ನಿಗಮಗಳಿಗೆ ವಿಶೇಷವಾದ ವರ್ಚಸ್ಸಿದೆ. ಈ ವರ್ಚಸ್ಸನ್ನು ಬೆಳೆಸುವಲ್ಲಿ ಅನೇಕ ಮಹಾನೀಯರುಗಳ ಪರಿಶ್ರಮ ಮತ್ತು ಕೊಡುಗೆಗಳಿವೆ. ಆದ್ದರಿಂದ ಅವರ ಶ್ರಮವನ್ನು ಗೌರವಿಸುತ್ತಾ, ನಾಡಿನಲ್ಲಿ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಎಲ್ಲಾ ನೌಕರರ ಜವಾಬ್ದಾರಿಯಾಗಿದೆ. ಇದರಿಂದ ಕರ್ನಾಟಕದ ಸರ್ಕಾರಿ ಸಾರಿಗೆಯ ಗತ ವೈಭವ ಮತ್ತೆ ಮರುಕಳಿಸಲು ಸಾಧ್ಯವಾಗುತ್ತದೆ, ಎಂದು ಆಶಿಸಿದರು.

RELATED TOPICS:
English summary :DCM Lakshman Savadi thanked transport employees for returning on duty

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...