Tue,Apr30,2024
ಕನ್ನಡ / English

ಅಂತ್ಯಸಂಸ್ಕಾರವನ್ನಾದ್ರೂ ಗೌರವಯುತವಾಗಿ ನಡೆಸಿ: ಸರ್ಕಾರಕ್ಕೆ ಹೆಚ್‍ಡಿಕೆ ಮನವಿ | ಜನತಾ ನ್ಯೂಸ್

23 Apr 2021
1460

ಬೆಂಗಳೂರು : ಕೊರೊನಾದಿಂದ ಸಾವನ್ನಪ್ಪಿರುವವರ ಅಂತ್ಯಸಂಸ್ಕಾರಕ್ಕಾದರೂ ಸರಿಯಾದ ಜಾಗದ ವ್ಯವಸ್ಥೆ ಕಲ್ಪಿಸಿ ಎಂದು ಎಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆಯಾಗಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದಿದ್ದಾರೆ.

ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ? ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ? ನಾನರಿದೆನೆಂಬಾತ ಇದಿರ ಕೇಳಲುಂಟೆ? ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು ಮಾತಿನ ಮಾತಿನೊಳಗೆ ಅರಿವೆಂಬುದುಂಟೆ?…. ಸೂತಕ ಹಿಂಗದೆ ಸಂದೇಹವಳಿಯದೆ ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ? ಜ್ಯೋತಿಯ ಬಸಿರೊಳಗೆ ಜನಿಸಿದ ಕಾಂತಿಯುತ ಬೆಳಗು ಗುಹೇಶ್ವರಾ ನಿಮ್ಮ ಶರಣ! ಎಂಬುದಾಗಿ ಅಲ್ಲಮ ಪ್ರಭು ವಚನವನ್ನು ಕೋಟ್ ಮಾಡಿ ತಿಳಿಸಿದ್ದಾರೆ.

ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :HD Kumaraswamy

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...