Sat,May11,2024
ಕನ್ನಡ / English

ತಿಂಗಳಿಗೆ 100 ಕೋಟಿ ಲಂಚ ಪ್ರಕರಣ : ಅನಿಲ್ ದೇಶಮುಖ್ ಮನೆ ಮೇಲೆ ಸಿಬಿಐ ದಾಳಿ, ಎಫ್ಐಆರ್ ದಾಖಲು | ಜನತಾ ನ್ಯೂಸ್

24 Apr 2021
2836

ಮುಂಬೈ : ತಮ್ಮ ವಿರುದ್ಧದ ಸುಲಿಗೆ ಆರೋಪಗಳ ಕುರಿತು ಪ್ರಾಥಮಿಕ ತನಿಖೆ ಆರಂಭಿಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಇಂದು ಕೇಂದ್ರ ತನಿಖಾ ದಳ(ಸಿಬಿಐ)ದ ತನಿಖೆಯ ಬಿಸಿಯನ್ನು ಅನುಭವಿಸಿದ್ದಾರೆ.

ಅಪರಾಧ ಗುಪ್ತಚರ ಘಟಕದ ಸಹಾಯದಿಂದ ಮುಂಬೈನಾದ್ಯಂತ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ ಹಣವನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಮುಂಬೈ ಅಪರಾಧ ಗುಪ್ತಚರ ಘಟಕದ ಮುಖ್ಯಸ್ಥ ಸಚಿನ್ ವಾಜೆ ಬಂಧನದ ಬೆನ್ನಲ್ಲೇ ಗೃಹರಕ್ಷಕ ದಳಕ್ಕೆ ವರ್ಗಾವಣೆಗೊಂಡ ಮುಂಬೈ ಮಾಜಿ ಪೋಲಿಸ್ ಆಯುಕ್ತ ಪರಂಬೀರ್ ಸಿಂಗ್ ಎನ್‌ಸಿಪಿ ಮುಖಂಡ ಅನಿಲ್ ದೇಶಮುಖ್ ವಿರುದ್ಧ ಪ್ರತಿ ತಿಂಗಳು 100 ಕೋಟಿ ಲಂಚ ಸಂಗ್ರಹದ ಆರೋಪ ಮಾಡಿದ್ದು, ಈ ಕುರಿತು ಸಿಬಿಐ ತನಿಖೆ ನಡೆಯಬೇಕೆಂದು ಆಗ್ರಹಿಸಿ ಹೈಕೋರ್ಟ್ ಮೆಟ್ಟಲೇರಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗ ಮಹಾರಾಷ್ಟ್ರದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ. ಕೆಲವೇ ಗಂಟೆಗಳ ಮೊದಲು ಅನಿಲ್ ದೇಶಮುಖ್ ಅವರ ನಿವಾಸದಿಂದ ಹಿಂತಿರುಗಿದೆ. ಅದೇ ಸಮಯದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ನಿವಾಸದಲ್ಲಿ ತುರ್ತು ಸಭೆ ನಡೆದಿರುವುದು ತಿಳಿದುಬಂದಿದೆ.

ಸಿಬಿಐ ಈಗ ಪ್ರಾಥಮಿಕ ತನಿಖೆಯನ್ನು ನಿಯಮಿತ ಪ್ರಕರಣವನ್ನಾಗಿ ಪರಿವರ್ತಿಸಿದೆ ಮತ್ತು ಸಿಬಿಐ ಅನಿಲ್ ದೇಶ್ಮುಖ್ ಅವರ ನಿವಾಸದ ಮೇಲೆ ಸುಮಾರು 6.5 ಗಂಟೆಗಳ ಕಾಲ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದೆ, ಎನ್ನಲಾಗಿದೆ.

RELATED TOPICS:
English summary :100 Cr. bribe per month case : CBI raided Anil Deshmukh home, lodged FIR

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...