ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಸ್ಕ್ ಧರಿಸದೇ ಮದುವೆ ಕಾರ್ಯಕ್ರಮದಲ್ಲಿ ಭಾಗಿ: ಕೋವಿಡ್ ನಿಯಮ ಉಲ್ಲಂಘನೆ ಆರೋಪ | ಜನತಾ ನ್ಯೂಸ್
ಕಾರವಾರ : ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಸ್ಕ್ ಧರಿಸದೇ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೊರೋನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಟೋ ಶೇರ್ ಮಾಡಿ, ಸಾರ್ವಜನಿಕರು ಕಿಡಿಕಾರಿದ್ದಾರೆ.
ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ನಿನ್ನೆಯ ಭಾನುವಾರದಂದು ಸಿದ್ದಾಪುರದಲ್ಲಿ ನಡೆದಂತ ಆಪ್ತರ ಮದುವೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬೆಂಗಳೂರಿನಿಂದ ಆಗಮಿಸಿದ್ದಂತ ಅವರು, ಸಮಾರಂಭದಲ್ಲಿ ಮಾಸ್ಕ್ ಧರಿಸದೇ, ಮದು ಮಕ್ಕಳನ್ನು ಹಾರೈಸಿದ್ದಾರೆ.
ಮದುವೆಗೆ ಆಗಮಿಸಿ ಮಾಸ್ಕ್ ಹಾಕದೆ ನಿಂತು ಕೋವಿಡ್ ನಿಯಮಗಳನ್ನು ಕಾಗೇರಿಯವರು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಇಂತಹ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರಾಜಕಾರಣಿಗಳು ಮದುವೆ, ಸಭೆ-ಸಮಾರಂಭಗಳಲ್ಲಿ ಹೇಗ್ ಬೇಕಾದ್ರೂ ಭಾಗವಹಿಸಬಹುದು. ಹೇಗ್ ಬೇಕಾದ್ರೂ ಓಡಾಡಬಹುದು. ಜನಸಾಮಾನ್ಯರಿಗೊಂದು ಕಾನೂನು, ರಾಜಕಾರಣಿಗಳಿಗೆ ಒಂದು ಕಾನೂನಾ ಎಂದು ನಾಗರಿಕರು ಪ್ರಶ್ನಿಸುತ್ತಾರೆ.