ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರಿಗೆ ಕೋವಿಡ್ ದೃಢ | ಜನತಾ ನ್ಯೂಸ್
ಬೆಳಗಾವಿ : ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಹಾಗೂ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೋವಿಡ್ ತಪಾಸಣೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಆದರೂ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರೈಂಟೈನ್ ಆಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ವೈದ್ಯರ ಸಲಹೆ ಪಡೆಯಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.
ಸದ್ಯ ಅವರು ಬೆಳಗಾವಿ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕ್ವಾರಂಟೈನ್ನಲ್ಲಿದ್ದಾರೆ.
RELATED TOPICS:
English summary :Belagavi