Sat,May11,2024
ಕನ್ನಡ / English

ಅಂಬುಲೆನ್ಸ್ ಗೆ ಲಾರಿ ಡಿಕ್ಕಿಯಾಗಿ ಧಗಧಗನೆ ಹೊತ್ತಿ ಉರಿದ ವಾಹನ, ಆಯಂಬುಲೆನ್ಸ್​ನಲ್ಲಿದ್ದ ಐವರ ಸ್ಥಿತಿ ಗಂಭೀರ | ಜನತಾ ನ್ಯೂಸ್

30 Apr 2021
1092

ಬೆಂಗಳೂರು : ತುಮಕೂರಿನಿಂದ ಬೆಂಗಳೂರಿಗೆ ಕೊರೊನಾ ಸೋಂಕಿತರನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ರಸ್ತೆ ಮಧ್ಯೆಯೇ ಆಂಬುಲೆನ್ಸ್ ಹೊತ್ತಿ ಉರಿದ ಘಟನೆ ನೆಲಮಂಗಲದ ಬಳಿ ನಡೆದಿದೆ.

ತುಮಕೂರು ಮಾರ್ಗದಿಂದ ಬೆಂಗಳೂರು ಕಡೆ ಅಂಬುಲೆನ್ಸ್ ಬರುತ್ತಿದ್ದ ವೇಳೆ ಘಟನೆ ನಡೆದಿದ್ದು, ಆಯಂಬುಲೆನ್ಸ್​ನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ನೆಲಮಂಗಲ ಸಾರ್ವಜನಿಕ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯರಿಬ್ಬರು, ಕಾಲು ಮುರಿದ ಗಾಯಾಳು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಲಾರಿ ತುಮಕೂರಿನಿಂದ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಅಂಬುಲೆನ್ಸ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿದ. ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಆಂಬುಲೆನ್ಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಆಯಂಬುಲೆನ್ಸ್​​ನಲ್ಲಿದ್ದ ಅಸೀನಾ (50), ಶಬೀನಾ (45) ಇಬ್ಬರಿಗೂ ಸುಟ್ಟ ಗಾಯಗಳಾಗಿವೆ. ಸಲ್ಮಾನ್ (20), ಆಂಬುಲೆನ್ಸ್ ಚಾಲಕ ಸಾದಿಖ್ (20) ಸಣ್ಣಪುಟ್ಟ ಗಾಯಗಳಾಗಿವೆ. ಮತ್ತೋರ್ವ ಸಾದಿಕ್ ಎಂಬುವವನ ಕಾಲು ಮುರಿದಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

janata

RELATED TOPICS:
English summary :Bangalore

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...