Thu,May02,2024
ಕನ್ನಡ / English

ರಾಜ್ಯಕ್ಕೆ 1200 ಮೆ.ಟನ್​ ಆಮ್ಲಜನಕ ಪೂರೈಸುವಂತೆ ಸುಪ್ರೀಂ ಆದೇಶ | ಜನತಾ ನ್ಯೂಸ್

07 May 2021
1625

ಬೆಂಗಳೂರು : ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿದ್ದ ಕೇಂದ್ರ ಸರ್ಕಾರಕ್ಕೆ ಭಾರೀ ಮುಖಭಂಗ ಆಗಿದೆ.

ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕದ ಅಭಾವದಿಂದಾಗಿ ಸೋಂಕಿತರು ಸಾವನ್ನಪ್ಪಿದ್ದ ಬಳಿಕ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಜ್ಯ ಹೈಕೋರ್ಟ್​ ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆಯನ್ನ 965 ಮೆ.ಟನ್​ನಿಂದ 1200 ಮೆ.ಟನ್​ಗೆ ಏರಿಕೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ ಕರ್ನಾಟಕ ಹೈಕೋರ್ಟ್​ನ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು.

ದೆಹಲಿಗೆ ಆಕ್ಸಿಜನ್ ಸರಬರಾಜು ಕುರಿತು ವಿಚಾರಣೆ ನಡೆಸುತ್ತಿದ್ದ ವೇಳೆ ಸಾಲಿಸಿಟ್ ಜನರಲ್ ತುಷಾರ್ ಮೆಹ್ತಾ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್​ ನೇತೃತ್ವದ ಪೀಠದ ಎದುರು ವಿಶೇಷ ಮನವಿ ಸಲ್ಲಿಸಿದರು. ಈ ವಿಷಯವನ್ನು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅವರ ಎದುರು ಸಲ್ಲಿಸುವಂತೆ ನ್ಯಾಯಮೂರ್ತಿ ಚಂದ್ರಚೂಡ್ ಸೂಚಿಸಿದ್ದರು. ಸಮರ್ಪಕ ದಾಖಲೆಗಳನ್ನು ಪರಿಶೀಲಿಸದೇ ನಾವಾದರೂ ಏನು ಮಾಡಲು ಸಾಧ್ಯ ಎಂದು ನ್ಯಾಯಮೂರ್ತಿ ಚಂದ್ರಚೂಡ್​ ಪ್ರಶ್ನಿಸಿದ್ದರು.

ಇಂದು ನಡೆದ ವಿಚಾರಣೆಯಲ್ಲಿ ಎಸ್​.ಜಿ.ಮೆಹ್ತಾ ಕೇಂದ್ರದ ಪರವಾಗಿ ವಾದ ಮಂಡಿಸಿದರಾದರೂ ಸುಪ್ರೀಂ ಕೋರ್ಟ್​ ಅವರ ವಾದವನ್ನು ಪುರಸ್ಕರಿಸಿಲ್ಲ. ಬದಲಾಗಿ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ಎಂ.ಆರ್. ಶಾ ಅವರನ್ನೊಳಗೊಂಡ ಪೀಠ ಕರ್ನಾಟಕದ ಜನ ತತ್ತರಿಸುವಂತೆ ಮಾಡಲ್ಲ. ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಸೂಕ್ತ ಪ್ರಕರಣದಲ್ಲಿ ಮಾತ್ರ ಮಧ್ಯಪ್ರವೇಶ ಮಾಡುತ್ತೇವೆ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಹೈಕೋರ್ಟ್​ ಆದೇಶಕ್ಕೆ ಮನ್ನಣೆ ನೀಡಿದೆ. ಕರ್ನಾಟಕ ಹೈಕೋರ್ಟ್​ನ ಆದೇಶದಂತೆಯೇ ರಾಜ್ಯಕ್ಕೆ 1200 ಮೆ. ಟನ್​​ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಿ ಎಂದು ಆದೇಶ ನೀಡಿದೆ.

RELATED TOPICS:
English summary :Supreme court

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...