ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ! | ಜನತಾ ನ್ಯೂಸ್
ಚಾಮರಾಜನಗರ : ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ.
ಚಾಮರಾಜನಗರದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಕೊರೊನಾ ಭಯದಿಂದ ಪೊಲೀಸರು ತಪಾಸಣೆಗೆ ಮುಂದಾಗಿಲ್ಲ.
ಚಾಮರಾಜನಗರ ಜಿಲ್ಲೆಯಲ್ಲಿ ಭಾನುವಾರ ಒಂದೇ 930 ಹೊಸ ಸೋಂಕು ಪ್ರಕರಣ ಪತ್ತೆಯಾಗಿದ್ದು, 561 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇದೀಗ 4,748 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ.
RELATED TOPICS:
English summary :Chamarajanagara