Wed,May08,2024
ಕನ್ನಡ / English

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂಸ್

10 May 2021
1298

ದಿಸ್ಪುರ್ : ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಇಂದು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ರಾಜ್ಯಪಾಲ ಜಗದೀಶ್ ಮುಖಿ ನೂತನ ಸಿಎಂ ಅವರಿಗೆ ಪ್ರಮಾಣ ವಚನ ಭೋಧಿಸಿದರು.

ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ಕೇಂದ್ರ ಸಚಿವರಾದ ಜಿತೇಂದ್ರ ಸಿಂಗ್ ಮತ್ತು ರಮೇಶ್ ತೆಲಿ, ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫು ರಿಯೊ ಮತ್ತು ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ರಿಪುನ್ ಬೋರಾ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಟ್ಟುನಿಟ್ಟಾದ ಕೋವಿಡ್-19 ನಿಯಮಾವಳಿಗಳ ನಡುವೆ ಅಸ್ಸಾಮೀಸ್‌ನಲ್ಲಿ ಪ್ರಮಾಣವಚನ ಮತ್ತು ಗೌಪ್ಯತೆಯನ್ನು ಸ್ವೀಕರಿಸಿದ ಶರ್ಮಾ ಅವರು ಸಾಂಪ್ರದಾಯಿಕ ರೇಷ್ಮೆ ಧೋತಿ ಮತ್ತು ಕುರ್ತಾ ಧರಿಸಿ ಕುತ್ತಿಗೆಗೆ ಮುಗಾ ಗಮೋಸಾ ಧರಿಸಿದ್ದರು. ಅವರೊಂದಿಗೆ, ಇತರ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣವಚನ ಸಮಾರಂಭದ ನಂತರ, ಐದು ವರ್ಷಗಳಲ್ಲಿ ಅಸ್ಸಾಂ ಅನ್ನು ಭಾರತದ ಅಗ್ರ ಐದು ರಾಜ್ಯಗಳಲ್ಲಿ ಒಂದನ್ನಾಗಿ ಮಾಡುವ ಗುರಿ ಹೊಂದಿದ್ದೇನೆ, ಎಂದು ಶರ್ಮಾ ಹೇಳಿದರು. ಹಿಂಸಾಚಾರವನ್ನು ತಪ್ಪಿಸಲು, ಮಾತುಕತೆ ನಡೆಸಲು ಮೇಜಿಗೆ ಬನ್ನಿ ಎಂದು ಅವರು ಉಲ್ಫಾ(ಐ) ಮುಖ್ಯಸ್ಥ ಪರೇಶ್ ಬರುವಾ ಅವರಿಗೆ ಮನವಿ ಮಾಡಿದರು.

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ ಸೋನೊವಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿರಲಿಲ್ಲ, ಅಷ್ಟಲ್ಲದೇ ಸೋನೊವಾಲ್ ಅವರು ಪಕ್ಷದ ಮುಖ ಎಂಬುದನ್ನು ನಿರಾಕರಿಸುವ ಮಟ್ಟಕ್ಕೆ ಹೋಗಿದ್ದರು. ರಾಜ್ಯದ ಉನ್ನತ ಸ್ಥಾನದ ಕುರಿತು ಸೋನೊವಾಲ್ ಮತ್ತು ಶರ್ಮಾ ನಡುವೆ ಹಗ್ಗಜಗ್ಗಾಟ ಆರಂಭಗೊಂಡಿದೆ ಎಂದು ಇದು ಸಾಕಷ್ಟು ಸ್ಪಷ್ಟಪಡಿಸಿತ್ತು.

RELATED TOPICS:
English summary :Himanta Biswa Sarma takes oath as 15th CM of Assam

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...