ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ | ಜನತಾ ನ್ಯೂಸ್
ಗದಗ: : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹರ್ತಿ ಗ್ರಾಮದಲ್ಲಿ ನಡೆದಿದೆ.
ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮೃತರನ್ನು ನವಲಗುಂದ ತಾಲೂಕಿನ ಆರಟ್ಟಿ ಗ್ರಾಮದ ವೀರೇಶ(26), ಶೇಖಪ್ಪ(45), ಬಾಪೂಗೌಡ (25),ಸಾವಿತ್ರಿ(50) ಎನ್ನುವವರು ಸ್ಥಳದಲ್ಲೇ ಸಾವನ್ನಪ್ಪಿದರು. ಒಬ್ಬರು ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆದಲ್ಲೇ ಕೊನೆಯುಸಿರೆಳೆದರು.
ಇವರು ನವಲಗುಂದದಿಂದ ಗದಗ ಮರ್ಗವಾಗಿ ಲಕ್ಷ್ಮೇಶ್ವರದಲ್ಲಿ ಹತ್ತಿರದ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಭಾಗಶ ಕಾರು ಮರಕ್ಕೆ ಸಿಲುಕಿಕೊಂಡಿದ್ದು, ಪರಿಣಾಮ ಚಾಲಕನೂ ಕೂಡ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದಾನೆ.
ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.