Sat,May04,2024
ಕನ್ನಡ / English

ಮಾನಗೆಟ್ಟ ಬಿಜೆಪಿಗರೇ ನಿಮ್ಮವರೇ ನಿಮ್ಮ ಮುಖಕ್ಕೆ ಉಗಿಯುತ್ತಿದ್ದಾರಲ್ಲ ಕೊಂಚವೂ ನಾಚಿಕೆ ಎನಿಸುತ್ತಿಲ್ಲವೇ? | ಜನತಾ ನ್ಯೂಸ್

12 May 2021
1146

ಬೆಂಗಳೂರು : ಮಾನಗೆಟ್ಟ ಬಿಜೆಪಿ ನಾಯಕರೇ ಕೊರೋನಾವನ್ನು ನಿಯಂತ್ರಿಸುವಲ್ಲಿ ನೀವು ಎಡವಿದ್ದೀರಿ. ಜನರಿಗೆ ಸಾವಿನ ಭಾಗ್ಯ ನೀಡುತ್ತಿದ್ದೀರಿ ಹೀಗಾಗಿ ನಿಮ್ಮವರೇ ನಿಮ್ಮ ಮುಖಕ್ಕೆ ಉಗಿಯುತ್ತಿದ್ದಾರೆ. ನಿಮಗೆ ಕೊಂಚವಾದರೂ ನಾಚಿಕೆಯಾಗುತ್ತಿಲ್ಲವೇ? ಎಂದು ತರಾಟೆಗೆ ತೆಗೆದುಕೊಂಡಿದೆ.

ಅಸಲಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದೀಗ ಮಹಾರಾಷ್ಟ್ರವನ್ನೂ ಹಿಂದಿಕ್ಕಿ ಕರ್ನಾಟಕ ಸೋಂಕು ಪೀಡಿತರ ರಾಜ್ಯಗಳ ಪಟ್ಟಿಯಲ್ಲಿ ಮೇಲಕ್ಕೇರಿದೆ. ಹೀಗಾಗಿ ಸ್ವತಃ ಬಿಜೆಪಿ ಮಾಜಿ ಸಚಿವರಾದ ಸಿ.ಟಿ. ರವಿ, ಸರ್ಕಾರ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಲ್ಲಿ ಎಡವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಮಾನಗೆಟ್ಟ ಬಿಜೆಪಿ ನಾಯಕರೇ ನಿಮ್ಮವರೇ ನಿಮಗೆ ಮುಖಕ್ಕೆ ಉಗಿಯುತ್ತಿದ್ದಾರಲ್ಲ ಕೊಂಚವೂ ನಾಚಿಕೆ ಎನಿಸುತ್ತಿಲ್ಲವೇ? ತಜ್ಞರ ಎಚ್ಚರಿಕೆ ಕಡೆಗಣಿಸಿ ಮುಂಜಾಗ್ರತೆ ವಹಿಸದೆ ಜನತೆಯನ್ನು ಸಾವಿನ ದವಡೆಗೆ ದೂಡಿದ ತಾವು ಲಸಿಕೆ ನೀಡುವಲ್ಲಿಯೂ ವಿಫಲರಾಗಿದ್ದೀರಿ. ವಿಪಕ್ಷ ನಾಯಕರ ಟೀಕೆ ಮಾಡಿದಾಕ್ಷಣ ನಿಮ್ಮ ಲೋಪ ಮುಚ್ಚಲಾರವು. ಕರ್ನಾಟಕದ ಬಿಜೆಪಿ ಸರ್ಕಾರ ಜನತೆಗೆ ಸಾವಿನ ಭಾಗ್ಯ ಯೋಜನೆ ಜಾರಿಗೊಳಿಸಿದೆ.

ನಿಮ್ಮ ಯೋಜನೆ ಶವ ಭಾಗ್ಯ, ಸ್ಮಶಾನ ಭಾಗ್ಯ ಅಲ್ಲವೇ? ಜನಾಕ್ರೋಶ ಹೆಚ್ಚಿದಾಗ ದಿಕ್ಕು ತಪ್ಪಿಸಲು ನಮ್ಮ ನಾಯಕರಾದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರ ವೈಯುಕ್ತಿಕವಾಗಿ ಗುರಿಯಾಗಿಸುವ ತಂತ್ರ ಬಿಜೆಪಿಯದ್ದು. ಬಿಜೆಪಿ ಐಟಿ ಸೆಲ್‌ನಲ್ಲಿ ಹೇಳುವ ಈ ಸುಳ್ಳನ್ನ ಆಸ್ಪತ್ರೆಗಳ ಮುಂದೆ ನಿಂತು ಜನತೆಯ ಎದುರು ಹೇಳುವ ತಾಕತ್ತಿದೆಯೇ ಹೇಳಿ ನಿಮ್ಮ ನಾಯಕರಿಗೆ ಹಾಗು 25 ಸಂಸದರಿಗೆ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

ಬಿಜೆಪಿ ಶಾಸಕ ಭೈರತಿ ಸುರೇಶ್ ಇತ್ತೀಚೆಗೆ ಸ್ಮಶಾನದಲ್ಲೂ ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗಿದ್ದರು. ಈ ಬಗ್ಗೆಯೂ ಕಿಡಿಕಾರಿರುವ ಕಾಂಗ್ರೆಸ್, ಬಿಜೆಪಿ ಕರ್ನಾಟಕ ಸ್ಮಶಾನದ ಎದುರೂ ಸಹ ಪ್ರಚಾರದ ತೆವಲು ತೀರಿಸಿಕೊಂಡ ತಾವು ತುತ್ತಿನ ಚೀಲದ ಬಗ್ಗೆ ಮಾತಾಡುವುದು ಹಾಸ್ಯಾಸ್ಪದ. ಅದು ಶಾಸಕ ಭೈರತಿ ಸುರೇಶ್ ಅವರ ಸೇವೆಯ ರೇಷನ್ ಕಿಟ್, ಫೋಟೋ ಕೂಡ ಅವರದ್ದೇ, ಅದನ್ನ ನೋಡಲಾಗದ ನಿಮ್ಮ ಬುದ್ಧಿಗೆ ಅಷ್ಟೇ ಅಲ್ಲ ಕಣ್ಣಿಗೂ ಮಂಕು ಕವಿದಿದೆ ಎಂದು ಕಿಡಿಕಾರಿದೆ.

RELATED TOPICS:
English summary :Cogress

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...