ಸಿಎಂ ಯಡಿಯೂರಪ್ಪರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ಕರೊನಾಗೆ ಬಲಿ | ಜನತಾ ನ್ಯೂಸ್
ಬೆಂಗಳೂರು : ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ (65) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ 10 ದಿನದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಹಿರಿಯ ಪತ್ರಕರ್ತ ಎಚ್.ಎಸ್. ಮಹದೇವ ಪ್ರಕಾಶ್ (65) ಇಂದು ಕರೊನಾದಿಂದಾಗಿ ಮೃತಪಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಸೋಂಕಿತರಾಗಿದ್ದ ಅವರು ಹತ್ತು ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು ಇಂದು ಕೊನೆಯುಸಿರೆಳೆದರು.
ಈ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರಿಗೆ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಸೇವೆ ಸಲ್ಲಿಸಿದ್ದರು. ಆನಂತರ ಅವರು ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.