ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರ ರಕ್ಷಣೆ! | ಜನತಾ ನ್ಯೂಸ್
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತದ ಪರಿಣಾಮದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬಿರುಸಿನ ಮಳೆ ಸುರಿಯುತ್ತಿದೆ.
ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರಿಕೆ ದೋಣಿಯ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ.
ಕಣ್ಣೂರಿನಿಂದ 10 ನಾಟಿಕಲ್ ಮೈಲಿ ದೂರದಲ್ಲಿ ದೋಣಿ ಕೆಟ್ಟು ನಿಂತಿತ್ತು. ಈ ಕುರಿತು ಕರಾವಳಿ ಕಾವಲು ಪಡೆ ಸಿಬ್ಬಂದಿ ಮಾಹಿತಿ ಪಡೆದು, ವಿಕ್ರಮ್ ಹಡಗಿನೊಂದಿಗೆ ಕಾರ್ಯಾಚರಣೆ ನಡೆಸಿ, ಮೂವರನ್ನು ರಕ್ಷಿಸಿದ್ದಾರೆ.
ಮೂವರನ್ನು ರಕ್ಷಿಸಲಾಗಿದ್ದು, ಅವರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆ ಎಂದು ಕರಾವಳಿ ಕಾವಲು ಪಡೆದ ಕಮಾಂಡರ್ ವೆಂಕಟೇಶ್ ತಿಳಿಸಿದ್ದಾರೆ.
English summary :Mangalore