Sat,May18,2024
ಕನ್ನಡ / English

ರಾಜ್ಯ ಸರ್ಕಾರ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿದೆ: ಸಿದ್ದರಾಮಯ್ಯ | ಜನತಾ ನ್ಯೂಸ್

16 May 2021
1376

ಬೆಂಗಳೂರು : ಕೊವಿಡ್ ಟೆಸ್ಟ್ ಮತ್ತು ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಸಂಖ್ಯೆ ಕೂಡಲೇ ಹೆಚ್ವಿಸಿ ಕೊವಿಡ್ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ಒತ್ತಾಯಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‌ ಯಡಿಯೂರಪ್ಪರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ತಜ್ಞರ ಪ್ರಕಾರ ವೈರಸ್ಸಿನ ಅಲೆ ಕಡಿಮೆಯಾಗುವುದೆಂದರೆ ಪರೀಕ್ಷೆಗಳನ್ನು ನಡೆಸಿದಾಗ ಪಾಸಿಟಿವಿಟಿ ದರ ಶೇ. 5 ಕ್ಕಿಂತ ಕಡಿಮೆಯಾಗಬೇಕು. ವಾಸ್ತವದಲ್ಲಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುವುದರ ಬದಲು ಹೆಚ್ಚಾಗುತ್ತಿದೆ ಎಂದಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಳ್ಳಾರಿ, ಹಾಸನ, ಮೈಸೂರು, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮುಂತಾದ ಜಿಲ್ಲೆಗಳ ಪಾಸಿಟಿವಿಟಿ ದರ ಶೇ. 50 ಕ್ಕಿಂತ ಹೆಚ್ಚಿಗೆ ಇದೆ. ಇನ್ನುಳಿದ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ ಶೇ. 35 ರ ಆಸುಪಾಸಿನಲ್ಲೇ ಇದೆ. ಆದರೆ, ರಾಜ್ಯ ಸರ್ಕಾರ ಸೋಂಕಿತರ ಪ್ರಮಾಣ ಇಳಿಮುಖವಾಗಿದೆಯೆಂದು ತೋರಿಸಲು ಸೋಂಕು ಪರೀಕ್ಷೆಯನ್ನೇ ಕಡಿಮೆ ಮಾಡಿದೆ. ಇದು ನಾಡಿನ ಜನತೆಗೆ ಎಸಗುತ್ತಿರುವ ದ್ರೋಹವಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಜನರನ್ನು ಕತ್ತಲಲ್ಲಿಟ್ಟು ಕೊರೊನಾ ನಿಯಂತ್ರಿಸಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಶೇ.20ಕ್ಕಿಂತ ಕಡಿಮೆ ಒಂದೆರಡು ಜಿಲ್ಲೆಗಳಲ್ಲಿ ಮಾತ್ರ ಇದೆ. ಹೀಗಿದ್ದರೂ ಕೊರೊನಾ ಹೇಗೆ ಕಡಿಮೆಯಾಗುತ್ತಿದೆ ಅಂತಾರೆ. ಕೊರೊನಾ ಕಡಿಮೆಯಾಗುತ್ತಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಏಪ್ರಿಲ್‌ನಲ್ಲಿ ಕೊವಿಡ್ ಟೆಸ್ಟ್ ದಿನಕ್ಕೆ 1.75 ಲಕ್ಷ ಮಾಡ್ತಿದ್ರು. ಈಗ ದಿನಕ್ಕೆ 1.24 ಲಕ್ಷ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈಗ ಕೊವಿಡ್ ಟೆಸ್ಟ್ ಶೇಕಡಾ 30ರಷ್ಟು ಕಡಿಮೆಯಾಗಿದೆ.

ಲಸಿಕೆ ಪಡೆಯುವುದಕ್ಕೂ ಸೂಕ್ತ ವ್ಯವಸ್ಥೆಯನ್ನು ಮಾಡಿಲ್ಲ. ಲಸಿಕಾ ಕೇಂದ್ರದ ಬಳಿ ಕಿ.ಮೀ.ಗಟ್ಟಲೇ ಕ್ಯೂ ನಿಲ್ಲಬೇಕಾಗಿದೆ. ಪಡಿತರ ಅಂಗಡಿಗಳ ಮುಂದೆಯೂ ಕ್ಯೂ ನಿಲ್ಲುವಂತಾಗಿದೆ. ಇಂತಹ ಅವ್ಯವಸ್ಥೆಯಲ್ಲಿ ಹೇಗೆ ಕೊರೊನಾ ನಿಯಂತ್ರಿಸ್ತೀರಿ? ಸರ್ಕಾರದ ತಪ್ಪು ಮುಚ್ಚಿಕೊಳ್ಳಲು ಟೆಸ್ಟ್ ಮಾಡುತ್ತಿದ್ದಾರೆ. ಟೆಸ್ಟ್ ಕಡಿಮೆ ಮಾಡಿ ನಿಯಂತ್ರಣಕ್ಕೆ ಬಂದಿದೆ ಎನ್ನುತ್ತಿದ್ದಾರೆ. ಜೊತೆಗೆ ಲಸಿಕೆ ಉತ್ಪಾದನೆ ಹೆಚ್ಚಿಸುವಂತೆ ಸಿದ್ದರಾಮಯ್ಯ ಸಿಎಂಗೆ ಒತ್ತಾಯಿಸಿ ಪತ್ರ ಬರೆದಿದ್ದಾರೆ.

RELATED TOPICS:
English summary :Siddaramaiah

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...