ಎಸ್ಎಸ್ಎಲ್ ಸಿ -ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳದ ಕಾರಣ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರರದ್ದು ಪಡಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಹಲವಾರು ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಹಲವಾರು ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅವರು ಮಾಧ್ಯಮಗಳ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.
ಕೋವಿಡ್ ತೀವ್ರ ಪ್ರಸರಣದ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆಯೇ ಹೊರತು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ಈಗ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಹುರುಳು ಇಲ್ಲ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು.
ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.