Fri,May10,2024
ಕನ್ನಡ / English

ರಾಜ್ಯದಲ್ಲಿ 97 ಮಂದಿಗೆ ಬ್ಲ್ಯಾಕ್ ಫಂಗಸ್, ನಾಲ್ವರು ಬಲಿ: ಆರೋಗ್ಯ ಸಚಿವ ಸುಧಾಕರ್ ಮಾಹಿತಿ | ಜನತಾ ನ್ಯೂಸ್

17 May 2021
1126

ಬೆಂಗಳೂರು : ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ನಿಂದಾಗಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ. ಇಂತಹ ರೋಗವು 97 ಜನರಲ್ಲಿ ಕಾಣಿಸಿಕೊಂಡಿರೋದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಜ್ಯದಲ್ಲಿ ಕೊರೋನಾ ಸೋಂಕಿನ ಮಧ್ಯೆ ಬ್ಲ್ಯಾಕ್​ ಫಂಗಸ್​ ಆತಂಕ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಸಂಬಂಧ ಆರೋಗ್ಯ ಸಚಿವ ಕೆ.ಸುಧಾಕರ್​​ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಿತು. ನೇತ್ರ ತಜ್ಞ ಭುಜಂಗಶೆಟ್ಡಿ, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಬ್ಲ್ಯಾಕ್​​ ಫಂಗಸ್​ ಬಗ್ಗೆ ಚರ್ಚಿಸಿದರು.

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್​, ಕೇಂದ್ರ ಸರ್ಕಾರ ಕಪ್ಪು ಶಿಲೀಂದ್ರಿ ಕಾಯಿಲೆಯನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ತಿಳಿಸಿದೆ. ಇದರ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಬ್ಲ್ಯಾಕ್​ ಫಂಗಸ್​​ ಕೋವಿಡ್​ನಷ್ಟು ಭೀಕರವಲ್ಲ. ಕೇಂದ್ರ ಸರ್ಕಾರದಿಂದ ಈ ಕಾಯಿಲೆ ಬಗ್ಗೆ ಕೆಲವು ಮಾರ್ಗಸೂಚಿ ನೀಡಲಾಗಿದೆ. ಕೆಲವು ರಾಜ್ಯದಲ್ಲಿ ಪ್ರೋಟೋಕಾಲ್ ಜಾರಿಯಲ್ಲಿದೆ. ಹೀಗಾಗಿ ಜನ ಆತಂಕ ಪಡುವ ಅಗತ್ಯವಿಲ್ಲ ಎಂದರು.

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ರೋಗದಿಂದಾಗಿ ಬೆಂಗಳೂರಿನಲ್ಲಿ ಮೂವರು, ಕೋಲಾರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಾವನ್ನಪ್ಪಿದಂತ ಮೂವರು ಕೋವಿಡ್ ಸ್ಟೇಜ್ ಇದ್ದಾಗಲೇ ತೀರಿಕೊಂಡಿದ್ದರು. ಇಂತವರಿಗೆ ಬ್ಲ್ಯಾಕ್ ಫಂಗಸ್ ಕೂಡ ಪತ್ತೆಯಾಗಿತ್ತು ಎಂದು ತಿಳಿಸಿದ್ದಾರೆ.

ಕ್ಯಾನ್ಸರ್ ರೋಗಿಗಳು, ಹೆಚ್‌ಐವಿ ಇರುವವರು, ಅಂಗಾಂಗ ಕಸಿ ಮಾಡಿಸಿಕೊಂಡವರಿಗೆ ಈ ಫಂಗಸ್ ತಗುಲುವ ಸಾಧ್ಯತೆಯಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಮಧುಮೇಹಿಗಳು, ಅಂಗಾಂಗ ಕಸಿ ಮಾಡಿಸಿಕೊಂಡವರು, ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿರುವವರು, ಹೆಚ್‌ಐವಿ ಸೇರಿದಂತೆ ಇತರೆ ಕಾಯಿಲೆ ಇದ್ದವರು ಎಚ್ಚರದಿಂದ ಇರಬೇಕು.

ಕೊರೊನಾದಿಂದ ಗುಣಮುಖರಾದ ಬಳಿಕ ಕಿವಿ, ಮೂಗು, ಕಣ್ಣು ತಪಾಸಣೆ ಮಾಡಿಸಿಕೊಳ್ಳಬೇಕು. ತಪಾಸಣೆ ಮಾಡಿಸಿಕೊಂಡು ಡಿಸ್ಚಾರ್ಜ್ ಆಗಬೇಕು. ಇದನ್ನು ಯಾರೂ ಮುಚ್ಚಿಡಬಾರದು. ಮುಚ್ಚಿಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಇಂದು ನೋಟಿಸ್ ಸಹ ಹೊರಡಿಸುತ್ತೇವೆ ಎಂದು ತಿಳಿಸಿದರು.

RELATED TOPICS:
English summary :Black fungus treatment facility launched at Bengaluru hospital

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...