Sat,Apr27,2024
ಕನ್ನಡ / English

ಸಿಬಿಐ ಕಚೇರಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ : ಕಾನೂನು ಸುವ್ಯವಸ್ಥೆ ಕುರಿತು ರಾಜ್ಯಪಾಲರ ಎಚ್ಚರಿಕೆ ರವಾನೆ | ಜನತಾ ನ್ಯೂಸ್

17 May 2021
1170

ಕೊಲ್ಕೊತ್ತಾ : ಸಿಬಿಐ ಸೋಮವಾರ ಏಕಕಾಲದಲ್ಲಿ ದಾಳಿಗಳನ್ನು ಪ್ರಾರಂಭಿಸಿದ್ದು, ನಂತರ ಟಿಎಂಸಿ ಘಟಾನುಘಟಿಗಳು ಮತ್ತು ಪಶ್ಚಿಮ ಬಂಗಾಳದ ಮಂತ್ರಿಗಳಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ ಮತ್ತು ಶಾಸಕ ಮದನ್ ಮಿತ್ರಾ ಅವರನ್ನು ನಾರದಾ ಸ್ಟಿಂಗ್ ಪ್ರಕರಣದ ತನಿಖೆಯಲ್ಲಿ ಬಂಧಿಸಿದೆ. ಇದಾದ ಕೆಲವೇ ಗಂಟೆಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಬಿಐ ಕಚೇರಿಯನ್ನು ತಲುಪಿದ್ದಾರೆ ಹಾಗೂ ಮಮತಾ ಸುಮಾರು ಆರು ಗಂಟೆಗಳ ಕಾಲ ಅಲ್ಲಿಯೇ ಇದ್ದರು.

ಸಚಿವರು ಮತ್ತು ಇತರರನ್ನು ಬಂಧಿಸಿದ ನಂತರ ಪಶ್ಚಿಮ ಬಂಗಾಳದ ಸಿಬಿಐ ಕಚೇರಿಯ ಹೊರಗೆ ಟಿಎಂಸಿ ಕಾರ್ಯಕರ್ತರು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ರಾಜ್ಯಪಾಲ ಜಗದೀಪ್ ಧಂಕರ್ ಅವರು, ರಾಜ್ಯದಲ್ಲಿ ಸಂಪೂರ್ಣ ಅರಾಜಕತೆ ಸೃಷ್ಟಿಯಾಗಿದೆ ಇದೆ, ಎಂದು ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ.

ಟಿಎಂಸಿ ನಾಯಕರೊಂದಿಗೆ, ಕೋಲ್ಕತಾ ಮಾಜಿ ಮೇಯರ್ ಸೋವನ್ ಚಟರ್ಜಿಯನ್ನೂ ಇದೇ ಪ್ರಕರಣದಲ್ಲಿ ಸಿಬಿಐ ವಶಕ್ಕೆ ಪಡೆದಿದೆ. ನಾರದಾ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲಿ ಟಿಎಂಸಿ ನಾಯಕರನ್ನು ಕೇಂದ್ರ ತನಿಖಾ ದಳ(ಸಿಬಿಐ) ಕಚೇರಿಗೆ ಕರೆದೊಯ್ಯಲಾಯಿತು ಮತ್ತು ನಂತರ ಅವರನ್ನು ಬಂಧಿಸಲಾಯಿತು. ಕೆಲವು ದಿನಗಳ ಹಿಂದೆಯೇ ಈ ಎಲ್ಲಾ ಟಿಎಂಸಿ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸಲು, ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಸಿಬಿಐಗೆ ಅನುಮತಿ ನೀಡಿದ್ದರು.

ಸ್ಫೋಟಕ ಪರಿಸ್ಥಿತಿ ಯನ್ನು ನಿಯಂತ್ರಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸೂಚಿಸಿರುವ ರಾಜ್ಯಪಾಲರು, ಪೊಲೀಸರು ಮೌನವಾಗಿದ್ದು ಪ್ರತಿಭಟನಾಕಾರರ ವಿರುದ್ಧ ಯಾವುದೇ ಸ್ಪಷ್ಟ ಕ್ರಮ ತೆಗೆದುಕೊಳ್ಳುತ್ತಿಲ್ಲ, ಎಂದು ದೂರಿದ್ದಾರೆ. ಅಲ್ಲದೇ, ಇಂತಹ ಕಾನೂನುಬಾಹಿರತೆ ಮತ್ತು ಸಾಂವಿಧಾನಿಕ ಕಾರ್ಯವಿಧಾನದ ವೈಫಲ್ಯದ ಪರಿಣಾಮಗಳನ್ನು ಅರಿತುಕೊಳ್ಳಿ, ಎಂದು ಎಚ್ಚರಿಸಿದ್ದಾರೆ.

ಈ ಕುರಿತು ಹೇಳಿರುವ ರಾಜ್ಯಪಾಲರು, ಇದು ಸಂಪೂರ್ಣ ಕಾನೂನುಬಾಹಿರ ಮತ್ತು ಅರಾಜಕತೆ. ಪೊಲೀಸ್ ಮತ್ತು ಆಡಳಿತ ಮೌನವಾಗಿದೆ. ಅಂತಹ ಕಾನೂನುಬಾಹಿರತೆ ಮತ್ತು ಸಾಂವಿಧಾನಿಕ ಕಾರ್ಯವಿಧಾನದ ವೈಫಲ್ಯದ ಪರಿಣಾಮಗಳನ್ನು ನೀವು ಅರಿತುಕೊಳ್ಳುತ್ತೀರಿ ಎಂದು ಭಾವಿಸುವುದಾಗಿ, ಟ್ವೀಟ್ ಮೂಲಕ ಸಿಎಂ ಮಮತಾ ಬ್ಯಾನರ್ಜಿಗೆ ಸಂದೇಶ ರವಾನಿಸಿದ್ದಾರೆ.

ನಾರದ ರಹಸ್ಯ ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೂವರು ಟಿಎಂಸಿ ನಾಯಕರು ಸೇರಿದಂತೆ 5 ಆರೋಪಿಗಳನ್ನು ಬಂಧಿಸಿದ್ದು, ಆರೋಪಪಟ್ಟಿ ಸಹ ಸಲ್ಲಿಸಲಿದೆ. ರಾಜಕಾರಣಿಗಳು ಲಂಚ ತೆಗೆದುಕೊಳ್ಳುವುದು ಕ್ಯಾಮರಾದಲ್ಲಿ ಸೆರೆಯಾದ ಪ್ರಕರಣ ಇದಾಗಿದ್ದು, ಪಶ್ಚಿಮ ಬಂಗಾಳ ಸರ್ಕಾರದಲ್ಲಿ ತೀವ್ರ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

RELATED TOPICS:
English summary :TMC supporters attack CBI office : Governor warns on law and order

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...