Sun,May19,2024
ಕನ್ನಡ / English

ಅನುದಾನರಹಿತ ಶಾಲೆ ಶಿಕ್ಷಕ-ಶಿಕ್ಷಕೇತರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂ ಗೆ ಸಚಿವರ ಪತ್ರ | ಜನತಾ ನ್ಯೂಸ್

20 May 2021
1879

ಬೆಂಗಳೂರು : ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ಕೋವಿಡ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರಗಳಲ್ಲಿ ಶಿಕ್ಷಣ ಕ್ಷೇತ್ರವೂ ಪ್ರಧಾನವಾದ ಕ್ಷೇತ್ರವಾಗಿದೆ. ಸರ್ಕಾರ ವಿಧಿಸಿದ ಲಾಕ್ ಡೌನ್ ರಾಜ್ಯಾದ್ಯಂತ ಇರುವ ಸಾವಿರಾರು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಅವಲಂಬಿಸಿದ್ದ ಹಲವು ವರ್ಗಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ.

ಕಳೆದ ಸಾಲಿನಲ್ಲಿ ಭೌತಿಕ ತರಗತಿಗಳು ನಡೆಯದ ಕಾರಣ, ಪೋಷಕರು ಮಕ್ಕಳ ಬೋಧನಾ ಶುಲ್ಕವನ್ನು ಪಾವತಿಸಲು ನಿರೀಕ್ಷಿತ ರೀತಿಯಲ್ಲಿ ಆಸಕ್ತಿ ತೋರಲಿಲ್ಲ. ಇದೂ ಕೂಡಾ ಬಹು ವಿಧದ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಯಿತು.

ಖಾಸಗಿ ಶಾಲೆಗಳಲ್ಲಿ‌, ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಬಜೆಟ್ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೋಧಕ, ಬೋಧಕೇತರ ಸಿಬ್ಬಂದಿ ಮುನ್ನೆಲೆಗೆ ಬಾರದ‌, ಅತಿಯಾದ ಸಮಸ್ಯೆಗೆ ಸಿಲುಕಿರುವ ಸಮುದಾಯವಾಗಿದ್ದಾರೆ.

ಪೋಷಕ-ಶಾಲೆಗಳ ನಡುವಿನ ಸಮಸ್ಯೆಗಳ ನೇರ ಪರಿಣಾಮ ಈ ಸಮುದಾಯದ ಮೇಲಾಗಿದೆ. ಅಸಂಖ್ಯ ಶಿಕ್ಷಕರು, ನರೇಗಾ ಯೋಜನೆಯಡಿ‌ ಕೂಲಿ‌ ಕೆಲಸ ಮಾಡಿದ್ದಾರೆ, ಹಣ್ಣು ತರಕಾರಿ ಮಾರಿದ್ದಾರೆ. ಇದನ್ನು ನಾವು ಹಲವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಕೇಳಿದ್ದೇವೆ. ಅವರ ನೆರವಿಗೆ ಧಾವಿಸುವುದೂ ಸಹ ಸರ್ಕಾರದ ಜವಾಬ್ದಾರಿಯಾಗಿದೆ.

ಶಿಕ್ಷಣದಂತಹ ಪವಿತ್ರ ವೃತ್ತಿಯನ್ನು ಕೈಗೆತ್ತಿಕೊಂಡ ಇಂತಹ ಶಿಕ್ಷಕ ಸಮುದಾಯಕ್ಕೆ ನಾಗರಿಕ ಸಮಾಜದ ಪ್ರತಿಕ್ರಿಯೆ ತನ್ನದೇ ಆದ ದೂರಗಾಮಿ, ನಕಾರಾತ್ಮಕವಾದ ಪರಿಣಾಮವನ್ನು ಬೀರಬಲ್ಲುದು. ಮುನ್ನೆಲೆಗೆ ಬಾರದ ಹಾಗೂ ತಮ್ಮ ಆಯ್ಕೆಯ ಬೌದ್ಧಿಕ ಕ್ಷೇತ್ರ ಕಲ್ಪಿಸುವ ಸಾಮಾಜಿಕ ಸಂಕೋಚದ ಕಾರಣ, ಈ ವರ್ಗ ಗದ್ದಲದ ಹೋರಾಟಕ್ಕೂ ಮುಂದಾಗಿಲ್ಲ.

ಆದರೆ, ಈ ಸಮುದಾಯ ತೀವ್ರ ಆರ್ಥಿಕ-ಭೌತಿಕ ಸಂಕಷ್ಟಗಳನ್ನು ಅನುಭವಿಸುತ್ತಿರುವುದು ಸತ್ಯ. ಹಾಗಾಗಿ ಇಂತಹ ಸಂದರ್ಭದಲ್ಲಿ ತಾವು ಈ ವರ್ಗದ ಬಗ್ಗೆ ವಿಶೇಷ ಕಾಳಜಿಯನ್ನು ತೋರಬೇಕಾದ ತುರ್ತು ಅವಶ್ಯಕತೆ ಇರುತ್ತದೆ. ಈ ವರ್ಗಕ್ಕೆ ನೀಡುವ ಸಹಕಾರವು ನಮ್ಮ ಮಕ್ಕಳ ಭವಿಷ್ಯ ಕಾಯುವಂತಹ ನಿರ್ಣಯವಾಗುತ್ತದೆ.

ಆದ ಕಾರಣ, ದಯವಿಟ್ಟು, ಕೋವಿಡ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ, ಬಜೆಟ್ ಅನುದಾನರಹಿತ ಶಾಲೆ ಕಾಲೇಜುಗಳಲ್ಲಿ ಕೆಲಸ ಮಾಡುವ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ತಾವು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಈ ಸಮುದಾಯಕ್ಕೆ ವಿಶ್ವಾಸ ತುಂಬಬೇಕೆಂದು ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

RELATED TOPICS:
English summary :Suresh Kumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...