ಭೀಕರ ಅಪಘಾತ: ರೋಗಿ ಸ್ಥಳದಲ್ಲೇ ಸಾವು, ಚಾಲಕ ಸೇರಿ ಮೂವರಿಗೆ ಗಾಯ | ಜನತಾ ನ್ಯೂಸ್
ಉತ್ತರಕನ್ನಡ : ಆಂಬುಲೆನ್ಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ನಲ್ಲಿದ್ದ ರೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ರಾಮತೀರ್ಥ ಬಳಿ ಗೋಕರ್ಣದಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಆಂಬುಲೆನ್ಸ್ ಭೀಕರ ಅಪಘಾತ ಸಂಭವಿಸಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ರಾಮಕೃಷ್ಣ ಗಣಪತಿ ಪ್ರಸಾದ (70) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Uttara kannada